ರಿಷಬ್ ಶೆಟ್ಟಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮ ಪಾತ್ರದಲ್ಲಿ ಭೂಮಿ ಪೆಡ್ನೇಕರ್ – Kannada News | Bhumi Pednekar to play Belawadi Mallamma in Rishab Shetty movie Chhatrapati Shivaji

ನ್ಯಾಷನಲ್ ಅವಾರ್ಡ್ ವಿಜೇತ ನಟ ರಿಷಬ್ ಶೆಟ್ಟಿ (Rishab Shetty) ಅಭಿನಯದ ಬಹುನಿರೀಕ್ಷಿತ ಐರಿಹಾಸಿಕ ಸಿನಿಮಾ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಚಿತ್ರತಂಡಕ್ಕೆ ಇದೀಗ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ (Bhumi Pednekar) ಸೇರ್ಪಡೆಯಾಗಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಅವರು ಕರ್ನಾಟಕದ ಧೀರ ಮಹಿಳೆ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ‘ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಮಹಾರಾಷ್ಟ್ರ ಹಾಗೂ ಕರ್ನಾಟಕದ ಇತಿಹಾಸದ ಮಹತ್ವದ ಘಟನೆಗಳನ್ನು ಆಧರಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಜೀವನ ಹಾಗೂ ಸಾಧನೆಗಳ ಸುತ್ತ ಸಾಗುವ ಈ ಬೃಹತ್ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ಶಿವಾಜಿ ಮಹಾರಾಜರಾಗಿ ಮಿಂಚಲಿದ್ದು, ಅರ್ಜುನ್ ರಾಂಪಾಲ್ ಮತ್ತು ವಿವೇಕ್ ಒಬೆರಾಯ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

‘ಕಾಂತಾರ’ ಫ್ಯಾನ್ ಎಂದ ಭೂಮಿ ಪೆಡ್ನೇಕರ್:

‘ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಬಗ್ಗೆ ಸಂತಸ ಹಂಚಿಕೊಂಡಿರುವ ಭೂಮಿ ಪೆಡ್ನೇಕರ್, ‘ಶಿವಾಜಿ ಮಹಾರಾಜರ ಜೀವನಾಧಾರಿತ ಈ ಐತಿಹಾಸಿಕ ಚಿತ್ರದಲ್ಲಿ ಭಾಗಿಯಾಗುತ್ತಿರುವುದು ನನ್ನ ಪಾಲಿನ ಗೌರವ. ಅದರಲ್ಲಿಯೂ ಕರ್ನಾಟಕದ ಸಾಹಸಿ ವೀರಾಂಗನೆ ಬೆಳವಡಿ ಮಲ್ಲಮ್ಮ ಅವರ ಪಾತ್ರವನ್ನು ತೆರೆಮೇಲೆ ತರುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ನಾನು ಕಾಂತಾರ ಸಿನಿಮಾದ ದೊಡ್ಡ ಫ್ಯಾನ್. ಅದರಲ್ಲಿ ರಿಷಬ್ ಶೆಟ್ಟಿ ಅವರ ಅಭಿನಯ ನನ್ನನ್ನು ಬೆರಗುಗೊಳಿಸಿತ್ತು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿ ನಟನೆಯ ‘ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರಕ್ಕೆ ‘ಗೇಮ್ ಆಫ್ ಥ್ರೋನ್ಸ್’ ಸಾಹಸ ನಿರ್ದೇಶಕ

ಎರಡು ಭಾಗಗಳಲ್ಲಿ ಅದ್ಧೂರಿ ಸಿನಿಮಾ:

ಈ ಚಿತ್ರವನ್ನು ಎರಡು ಭಾಗಗಳಲ್ಲಿ ತೆರೆಗೆ ತರಲು ಚಿತ್ರತಂಡ ಯೋಜಿಸಿದೆ. ರಿಷಿ ವಿರ್ಮಾನಿ ಚಿತ್ರಕಥೆ ಬರೆಯುತ್ತಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಪ್ರಸೂನ್ ಜೋಶಿ ಸಾಹಿತ್ಯ ಒದಗಿಸುತ್ತಿದ್ದಾರೆ. ದೊಡ್ಡ ಮಟ್ಟದ ತಾಂತ್ರಿಕ ತಂಡದೊಂದಿಗೆ ಸಿನಿಮಾ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *