
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಆರೋಪಿ ದರ್ಶನ್ ಸೇರಿದಂತೆ ಒಟ್ಟು ಆರು ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಪ್ರಮುಖ ಬೆಳವಣಿಗೆಯೆಂದರೆ, ಪ್ರಕರಣದ ಎ14 ಆರೋಪಿ ಪ್ರದೂಶ್ ಈಗಾಗಲೇ ಮಾಫಿ ಸಾಕ್ಷಿಯಾಗುವುದಾಗಿ ಅರ್ಜಿ ಸಲ್ಲಿಸಿದ್ದಾರೆ.
ಪ್ರದೂಶ್ ಅವರ ಈ ಅರ್ಜಿಯನ್ನು ಆಕ್ಷೇಪಿಸಿ ದರ್ಶನ್ ಪರ ವಕೀಲರು ಸಹ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದು, ಇಂದು ಅದರ ಬಗ್ಗೆ ಕೋರ್ಟ್ ನಿರ್ಧಾರ ಕೈಗೊಳ್ಳಲಿದೆ. ಆಕ್ಷೇಪಣೆ ಸಲ್ಲಿಸಲು ದರ್ಶನ್ ವಕೀಲರಿಗೆ ಅವಕಾಶ ನೀಡಲಾಗುವುದೇ ಅಥವಾ ಪ್ರದೂಶ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಲಾಗುವುದೇ ಎಂಬ ಕುತೂಹಲ ಮನೆ ಮಾಡಿದೆ. ಪ್ರದೂಶ್ ತನ್ನ ಅರ್ಜಿಯಲ್ಲಿ, ದರ್ಶನ್‌ನಿಂದ ಒತ್ತಡ, ಕೊಲೆ ನಡೆಯುವಾಗ ತಡೆಯುವ ಪ್ರಯತ್ನ, ದೇಹವನ್ನು ಸಾಗಿಸಿದ ರೀತಿ ಮತ್ತು ಗನ್‌ನಿಂದ ಬೆದರಿಕೆ ಕುರಿತು ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಅಂಶಗಳನ್ನು ಕೋರ್ಟ್ ಯಾವ ರೀತಿ ಪರಿಗಣಿಸುತ್ತದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ನಿರ್ಧಾರವಾಗಲಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.