ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು – Kannada News | Renukaswamy murder case: SPP Prasanna Kumar hits back at evidence tampering claims

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ನಡೆಸಿರುವ ತನಿಖಾಧಿಕಾರಿಗಳು ಸಾಕ್ಷ್ಯ ತಿದ್ದಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು. ಇದರ ವಿರುದ್ಧ ದರ್ಶನ್ ಅಭಿಮಾನಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಇದೀಗ ಈ ಆರೋಪಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಆರೋಪಿಯೊಬ್ಬರ ಪರ ವಕೀಲರು ಉದ್ದೇಶಪೂರ್ವಕವಾಗಿ ಹಾಗೂ ಕೇವಲ ಪ್ರಚಾರಕ್ಕಾಗಿ ಇಂಥಹಾ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

57ನೇ ಸಿಸಿಹೆಚ್ ಕೋರ್ಟ್ ವಾದಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ3 ಆರೋಪಿ ಪವನ್ ಪರ ವಕೀಲರು ಪ್ರಚಾರಕ್ಕಾಗಿ ಮೆಮೊ ಸಲ್ಲಿಸಿ, ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಮೊಬೈಲ್ ಸಂಖ್ಯೆ, ಐಎಂಇಐ ಸಂಖ್ಯೆಗಳ ಬಗ್ಗೆ ಆರೋಪಿಗಳೇ ತಕರರಾರು ಎತ್ತಿಲ್ಲ, ಅಲ್ಲದೆ, ಅವರು ಎತ್ತಿರುವ ಪ್ರಶ್ನೆಗಳಿಗೆ ತನಿಖಾಧಿಕಾರಿಗಳೇ ನ್ಯಾಯಾಲಯದಲ್ಲಿ ಉತ್ತರ ನೀಡಲಿದ್ದಾರೆ’ ಎಂದಿದ್ದಾರೆ.

ತನಿಖಾಧಿಕಾರಿಯನ್ನು ಆರೋಪಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಹಾಗಿದ್ದರೂ ಸಹ ಪವನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಇದೊಂದು ಹಾಸ್ಯಾಸ್ಪದ ಅರ್ಜಿ, ಈ ರೀತಿಯ ಅನವಶ್ಯಕ ಅರ್ಜಿಗಳನ್ನು ಸಲ್ಲಿಸಿ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ಪವನ್ ಪರ ವಕೀಲರು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಪವನ್ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದರ್ಶನ್ ಕ್ಷಮೆ ಕೇಳಿದರೆ ಒಪ್ಪಿಕೊಳ್ತೀರಾ? ರೇಣುಕಾ ಸ್ವಾಮಿ ತಂದೆ ಹೇಳಿದ್ದೇನು?

ಪ್ರತಿದಿನವೂ ವಿಚಾರಣೆ ನಡೆಸುವಂತೆ ದರ್ಶನ್ ಪರ ವಕೀಲರು ಸಲ್ಲಿಸಿರುವ ಅರ್ಜಿಗೆ ತಕರಾರು ಎತ್ತಿದ ಪ್ರಸನ್ನ ಅವರು, ಪ್ರತಿದಿನ ವಿಚಾರಣೆ ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿದೆ’ ಎಂದಿದ್ದಾರೆ. ಇನ್ನು ಕುಟುಂಬ ಸದಸ್ಯರ ಭೇಟಿಗೆ ಅವಕಾಶ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯ ಬಗ್ಗೆಯೂ ಪ್ರತಿವಾದ ಮಂಡಿಸಿದ ಪ್ರಸನ್ನ ಅವರು, ‘ಜೈಲು ಅಧಿಕಾರಿಗೆ ಮನವಿ ನೀಡದೇ ನೇರ ಅರ್ಜಿ ಸಲ್ಲಿಸಿದ್ದಾರೆ ಇದು ನಿಯಮಕ್ಕೆ ಬಾಹಿರ. ಜೈಲು ಕೈಪಿಡಿಯಲ್ಲಿರುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ, ಕೋರ್ಟ್​ಗೆ ಖುದ್ದು ಹಾಜರುಪಡಿಸಲು ಆರೋಪಿಗಳು ಕೋರಿದ್ದಾರೆ ಆದರೆ ಇದರಿಂದ ಇದರಿಂದ ದರ್ಶನ್ ಭದ್ರತೆಗೆ ಸಮಸ್ಯೆ ಆಗಲಿದೆ ಎಂದು ಪ್ರಸನ್ನ ವಾದಿಸಿದ್ದಾರೆ. ಅರ್ಜಿಗಳ ಕುರಿತು ಆದೇಶವನ್ನು ನ್ಯಾಯಾಲಯವು ಕಾಯ್ದಿರಿಸಿದೆ.

ತನಿಖಾಧಿಕಾರಿಯು ಸಾಕ್ಷ್ಯಗಳನ್ನು ತಿರುಚಿದ್ದು, ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ್ದಾರೆ ಹಾಗಾಗಿ ಅವರನ್ನು ಈ ಪ್ರಕರಣದಲ್ಲಿ 18ನೇ ಆರೋಪಿಯನ್ನಾಗಿ ಮಾಡಬೇಕು ಎಂದು ಪವನ್ ಪರ ವಕೀಲರು ಅರ್ಜಿ ಹೂಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರು ನಡೆದ ಸ್ಥಳಗಳಿಗೆ (ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯೂ ಸೇರಿದಂತೆ) ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲು ಅನುಮತಿ ಕೊಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರ ಅಭಿಪ್ರಾಯವನ್ನು ನ್ಯಾಯಾಲಯ ಕೇಳಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *