ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯ ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಸರಣಿಯ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಏಕೆಂದರೆ ಎರಡೂ ತಂಡಗಳು ಇದುವರೆಗೆ ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಕೊನೆಯ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಸರಣಿ ಸಿಗಲಿದೆ. ಇದರ ಜೊತೆಗೆ ಈ ಪಂದ್ಯದ ಗೆಲುವು ಟೀಂ ಇಂಡಿಯಾಕ್ಕೆ ಬಹಳ ಮುಖ್ಯವಾಗಿದೆ. ಏಕೆಂದರೆ ವರ್ಷಗಳ ಕಾಲ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿ ತಂಡಕ್ಕೆ ಐಸಿಸಿ ಟ್ರೋಫಿಗಳನ್ನು ಗೆದ್ದುಕೊಟ್ಟ ರೋಹಿತ್ ಶರ್ಮಾಗೆ (Rohit Sharma) ಇದು ಕೊನೆಯ ಅಂತರರಾಷ್ಟ್ರೀಯ ಪಂದ್ಯ ಎನ್ನಲಾಗುತ್ತಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲುವ ಮೂಲಕ ರೋಹಿತ್ಗೆ ವಿದಾಯ ಹೇಳಲು ಟೀಂ ಇಂಡಿಯಾ ತಯಾರಿ ನಡೆಸಿದೆ. ಹೀಗಾಗಿ ಈ ಪಂದ್ಯದ ಪೂರ್ಣ ವಿವರವನ್ನು ನಾವು ನಿಮಗೆ ನೀಡಲಿದ್ದೇವೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಜುಲೈ 18 ರಂದು ನಡೆಯಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಡಿಜಿಟಲ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವ ಸೌಲಭ್ಯವನ್ನು ನೀಡುತ್ತದೆ.
ಉಭಯ ತಂಡಗಳು
ಏಕದಿನ ಸರಣಿಗೆ ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.
ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಆದಿಲ್ ರಶೀದ್, ಜೋ ರೂಟ್, ಜೋಶ್ ಟಂಗ್.
