Headlines

ಲಕ್ಕುಂಡಿಯಲ್ಲಿ ಎಲ್ಲೇ ಆಗೆದರೂ ಸಿಗುತ್ತಂತೆ ಬಂಗಾರ! ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಈರಪ್ಪ ಕಣವಿ – Kannada News | Lakkundis Golden Secret: Tales of Ancient Treasure, Cursed Greed, and Government Searches in Gadag

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕ ವಿಚಾರ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಈರಪ್ಪ ಕಣವಿ ಎಂಬವರು ‘ಟಿವಿ9’ ಜತೆ ಮಾತನಾಡಿದ್ದು, ಈ ಗ್ರಾಮದಲ್ಲಿ ಮಳೆಗಾಲದಲ್ಲಿ ಹಿಂದೆಲ್ಲ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು ಎಂದಿದ್ದಾರೆ. ಗ್ರಾಮದಲ್ಲಿ ಎಲ್ಲೇ ಅಗೆದರೂ ಬಂಗಾರ ಸಿಗುತ್ತಿತ್ತು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಕಾರಣದಿಂದಾಗಿ, ನಿಧಿ ದೊರೆತರೂ ಅದನ್ನು ಸ್ವೀಕರಿಸುವುದು ಒಳ್ಳೆಯದಲ್ಲ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಕೇಂದ್ರ ಸರ್ಕಾರದಿಂದಲೂ ಚಿನ್ನ ಶೋಧಿಸುವ ಪ್ರಯತ್ನ ನಡೆದಿತ್ತು, ಆದರೆ ಅದು ವಿಫಲವಾಗಿತ್ತು. ಇಂದಿಗೂ ಗ್ರಾಮದಲ್ಲಿ ಚಿನ್ನ ನಿಕ್ಷೇಪವಿದೆ ಎಂಬ ನಂಬಿಕೆ ಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *