ರಾಯಚೂರು, ಏಪ್ರಿಲ್ 25: ರಾಯಚೂರಿನಲ್ಲಿ ಅಬಕಾರಿ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಅಕ್ರಮ ಸೇಂದಿ ದಂಧೆ ವಿರುದ್ಧ ಕಾರ್ಯಾಚರಣೆ ನಡೆಸಿ, ಕುಖ್ಯಾತ ಕಿಂಗ್ಪಿನ್ ನರಸಿಂಹಲು ಅಲಿಯಾಸ್ ಬ್ರೂಸ್ ಲೀ ಎಂಬಾತನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಚಂದ್ರಬಂಡಾ ರಸ್ತೆಯ ನಿವಾಸದಲ್ಲಿ ನಡೆದ ಈ ದಾಳಿಯಲ್ಲಿ, ಸಿಎಚ್ ಪೌಡರ್ ಮತ್ತು ಅಲ್ಪಜೋಲಂ ಸೇರಿದಂತೆ ನಿಷಿದ್ಧ ರಾಸಾಯನಿಕಗಳನ್ನು ಬಳಸಿ ತಯಾರಿಸಿದ 1325 ಲೀಟರ್ ಸೇಂದಿ ವಶಪಡಿಸಿಕೊಳ್ಳಲಾಗಿದೆ. ನರಸಿಂಹಲು ವಿರುದ್ಧ ಈಗಾಗಲೇ 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಹಿಂದೆಯೂ ಆತ ಗೂಂಡಾ ಕಾಯ್ದೆಯಡಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ದಾಳಿಯ ವೇಳೆ ನರಸಿಂಹಲು, ರಮೇಶ್ ಮತ್ತು ಮಹೇಶ್ ಎಂಬ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಅಬಕಾರಿ ಅಧಿಕಾರಿಗಳು ಇವರ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಬೇಸಿಗೆಯಲ್ಲಿ ಸೇಂದಿ ದಂಧೆ ಹೆಚ್ಚಾಗುತ್ತಿದ್ದು, ಅಮಾಯಕ ಕಾರ್ಮಿಕರನ್ನು ಗುರಿಯಾಗಿಸಿ ಶರಬತ್ ರೀತಿಯಲ್ಲಿ ಮಾರಾಟ ಮಾಡಲಾಗುತ್ತಿತ್ತು ಎಂಬುದು ಗೊತ್ತಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ