
ನವದೆಹಲಿ, ಏಪ್ರಿಲ್ 10: ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಿಂದ (Israel Attack) ಜನರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್ ದಾಳಿಯಿಂದಾಗಿ ಲೆಬನಾನ್ನಲ್ಲಿ ಹೆಚ್ಚುತ್ತಿರುವ ಜನರ ಸಾವಿನ ಸಂಖ್ಯೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನವಿರಾಮದ ನಂತರ ಲೆಬನಾನ್ನಲ್ಲಿ ಇಸ್ರೇಲ್ ತನ್ನ ಅತ್ಯಂತ ವಿನಾಶಕಾರಿ ದಾಳಿಗಳನ್ನು ನಡೆಸಿತ್ತು. ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು 1,150 ಜನರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್, “ಲೆಬನಾನ್ನಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕ ಸಾವುನೋವುಗಳ ವರದಿಗಳಿಂದ ನಾವು ತೀವ್ರ ಕಳವಳಗೊಂಡಿದ್ದೇವೆ. ಭಾರತವು ಯಾವಾಗಲೂ ನಾಗರಿಕರ ರಕ್ಷಣೆಯನ್ನು ಪ್ರಮುಖ ಆದ್ಯತೆಯಾಗಿ ಒತ್ತಿಹೇಳಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್
“ಲೆಬನಾನ್ನಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕ ಸಾವುನೋವುಗಳ ವರದಿಗಳಿಂದ ನಾವು ತೀವ್ರ ಕಳವಳಗೊಂಡಿದ್ದೇವೆ. ಭಾರತ ಯಾವಾಗಲೂ ನಾಗರಿಕರ ರಕ್ಷಣೆಯನ್ನು ಪ್ರಮುಖ ಆದ್ಯತೆಯಾಗಿ ಒತ್ತಿಹೇಳಿದೆ. ಅಂತಾರಾಷ್ಟ್ರೀಯ ಕಾನೂನನ್ನು ಪಾಲಿಸುವುದು, ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವುದು ಅತ್ಯಗತ್ಯ. ಲೆಬನಾನ್ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಭಾರತೀಯ ಸಮುದಾಯದೊಂದಿಗೆ ಅವರ ಸುರಕ್ಷತೆ ಮತ್ತು ಭದ್ರತೆಗಾಗಿ ನಿಕಟ ಸಂಪರ್ಕದಲ್ಲಿದೆ” ಎಂದು ರಣಧೀರ್ ಜೈಸ್ವಾಲ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
#WATCH | Delhi | MEA Official Spokesperson Randhir Jaiswal says, “We are deeply concerned by reports of a large number of civilian casualties in Lebanon. As a troop contributing country to the UNIFIL that is invested in Lebanon’s peace and security, the direction of events is… pic.twitter.com/U6xHPJscMV
— ANI (@ANI) April 10, 2026
ಇದನ್ನೂ ಓದಿ: ಲೆಬನಾನ್ನಲ್ಲಿ ಶಾಂತಿ ಸ್ಥಾಪನೆಯಾಗುವವರೆಗೆ ಚರ್ಚೆ ಇಲ್ಲ, ಅಮೆರಿಕದೊಂದಿಗೆ ಮಾತುಕತೆ ಸ್ಥಗಿತಗೊಳಿಸುವುದಾಗಿ ಇರಾನ್ ಎಚ್ಚರಿಕೆ
ಇರಾನ್ ಮತ್ತು ಯುಎಸ್ 2 ವಾರಗಳ ಒಪ್ಪಂದಕ್ಕೆ ಒಪ್ಪಿಕೊಂಡ ಬಳಿಕ ಈ ದಾಳಿಗಳು ನಡೆದಿವೆ. ಯುಎಸ್-ಇರಾನ್ ನಡುವಿನ ಕದನವಿರಾಮ ಲೆಬನಾನ್ಗೆ ಅನ್ವಯಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಲೆಬನಾನ್ ಮೇಲೆ ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಹಿಜ್ಬೊಲ್ಲಾ ಕೂಡ ಉತ್ತರ ಇಸ್ರೇಲ್ ಮೇಲೆ ರಾಕೆಟ್ ದಾಳಿಯನ್ನು ಮುಂದುವರೆಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ