ಬೆಂಗಳೂರು, ಆಗಸ್ಟ್ 03: ಕರ್ನಾಟಕ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಭಾರಿ ಟ್ವಿಸ್ಟ್ಗಳ ಬಳಿಕ ಅಂತಿಮವಾಗಿ 19 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಈ ಪ್ರಮುಖ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಗೈರಾಗಿದ್ದಾರೆ. ಮಧ್ಯಾಹ್ನವೇ ತಮ್ಮ ಆಪ್ತರೊಂದಿಗೆ ಪ್ರಮಾಣ ವಚನ ಸಮಾರಂಭಕ್ಕೆ ತಾನು ಹೋಗುವುದಿಲ್ಲ ಎಂದು ಅವರು ಹೇಳಿದ್ದರಂತೆ. ಈ ಗೈರಿಗೆ ನಿಖರ ಕಾರಣ ಮಾತ್ರ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
