ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.