ಲ್ಯಾಂಬೋರ್ಗಿನಿ ಕಾರು ಜಪ್ತಿ ಮಾಡಿದ ಸಾರಿಗೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್: 1 ವಾರದಲ್ಲಿ ಕಾರು ಹಿಂದಿರುಗಿಸಿ

ಲ್ಯಾಂಬೋರ್ಗಿನಿ ಕಾರು ಜಪ್ತಿ ಮಾಡಿದ ಸಾರಿಗೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್: 1 ವಾರದಲ್ಲಿ ಕಾರು ಹಿಂದಿರುಗಿಸಿ

ಬೆಂಗಳೂರು, ಮಾ.24: ಮನೆಯ ಕಾರಿನ ಶೆಡ್​​​​ನಲ್ಲಿದ್ದ ವಿಲಾಸಿ ಲ್ಯಾಂಬೋರ್ಗಿನಿ ಕಾರನ್ನು ಕಾನೂನು ಬಾಹಿರವಾಗಿ ಜಪ್ತಿ ಮಾಡಿದ್ದ ಸಾರಿಗೆ ಇಲಾಖೆಯ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿರುವ ನ್ಯಾಯಾಲಯ, ಒಂದು ವಾರದಲ್ಲಿ ಕಾರನ್ನು ಮಾಲೀಕರಿಗೆ ಹಿಂದಿರುಗಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ.

ರಾತ್ರಿ ವೇಳೆಯಲ್ಲಿ ಅರ್ಜಿದಾರರ ಮನೆಯ ಕಾರಿನ ಶೆಡ್​​​ಗೆ ನುಗ್ಗಿ ಕಾರನ್ನು ಸೀಜ್ ಮಾಡಿದ ವಿಧಾನವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ತರಾಟೆಗೆ ತೆಗೆದುಕೊಂಡಿದೆ. ಇದು ಕಾನೂನಿನ ಉಲ್ಲಂಘನೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಹೈ ಕಾರ್ ಕೇರ್’ ಮಾಲೀಕ ಜೆ. ರಾಮಕೃಷ್ಣಯ್ಯ ವಿರುದ್ಧ ಕಾರು ನೋಂದಣಿ ಸಂಬಂಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಇದನ್ನೂ ಓದಿ: ಅಪ್ರಾಪ್ತರ ಮದ್ಯಪಾನಕ್ಕೆ ಹೈಕೋರ್ಟ್ ಬ್ರೇಕ್! ವಯಸ್ಸಿನ ಪರೀಕ್ಷೆ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಯಾರಿಗೆ ಶಿಕ್ಷೆ?

ಸಾರಿಗೆ ಅಧಿಕಾರಿಗಳು ಎಷ್ಟೇ ಉತ್ತಮರಾಗಿದ್ದರೂ ತಮ್ಮ ಕರ್ತವ್ಯವನ್ನು ಕಾನೂನಿನ ಚೌಕಟ್ಟಿನಲ್ಲೇ ನಿರ್ವಹಿಸಬೇಕು. ಈ ಪ್ರಕರಣದಲ್ಲಿ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಮುಟ್ಟುಗೋಲು ಹಾಕಿಕೊಳ್ಳಲಾದ ಲ್ಯಾಂಬೋರ್ಗಿನಿ ಕಾರನ್ನು ಮುಂದಿನ ಒಂದು ವಾರದೊಳಗೆ ಮಾಲೀಕರಿಗೆ ಹಸ್ತಾಂತರಿಸಬೇಕು ಎಂದು ಆದೇಶಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *