ಲ್ಯಾಡಲ್ ಸ್ಫೋಟಕ್ಕೆ 8 ಕಾರ್ಮಿಕರು ಬಲಿ, ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ – Kannada News

ವಿಶಾಖಪಟ್ಟಣಂ, ಜೂನ್ 09: ವಿಶಾಖಪಟ್ಟಣಂನ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಎಂಟು ಕಾರ್ಮಿಕರು ಬಲಿಯಾಗಿದ್ದಾರೆ. ಕರಗಿದ ಕಬ್ಬಿಣವನ್ನು ಸಾಗಿಸುವಾಗ ಕ್ರೇನ್ ಕುಸಿದು, ಬಿಸಿ ಲೋಹ ಚೆಲ್ಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಈ ಪರಿಹಾರ ಕಾಯಂ ನೌಕರರು ಹಾಗೂ ಹೊರಗುತ್ತಿಗೆ ನೌಕರರು ಇಬ್ಬರಿಗೂ ಅನ್ವಯವಾಗುತ್ತದೆ. ಜೊತೆಗೆ, ಮೃತ ಕಾರ್ಮಿಕರ ಕುಟುಂಬದ ಒಬ್ಬ ಸದಸ್ಯರಿಗೆ ಕಾಯಂ ಉದ್ಯೋಗ, ಟೌನ್‌ಶಿಪ್‌ನಲ್ಲಿ ವಾಸವಿದ್ದ ಮನೆಯಲ್ಲೇ ಮುಂದುವರಿಯುವ ಅವಕಾಶ ಮತ್ತು ಕುಟುಂಬದ ಎಲ್ಲ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಘೋಷಿಸಲಾಯಿತು.

ಇದಲ್ಲದೆ, ಪ್ರಧಾನ ಮಂತ್ರಿ ನಿಧಿಯಿಂದಲೂ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿಯವರು ಘೋಷಿಸಿದ್ದಾರೆ. ಒಟ್ಟಾರೆ ವಿಮೆ ಸೇರಿದಂತೆ ಪ್ರತಿ ಕುಟುಂಬಕ್ಕೆ 38 ಲಕ್ಷ ರೂಪಾಯಿ ಲಭ್ಯವಾಗುವ ನಿರೀಕ್ಷೆಯಿದೆ. ಈ ಘಟಕದ ಪುನಶ್ಚೇತನಕ್ಕೆ ಅಡ್ಡಿಪಡಿಸದಂತೆ ಹೆಚ್.ಡಿ. ಕುಮಾರಸ್ವಾಮಿ ಕಾರ್ಮಿಕ ಮುಖಂಡರಲ್ಲಿ ಮನವಿ ಮಾಡಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *