ವಾಷಿಂಗ್ ಮಷಿನ್​​ಗೆ ಹಾಕಿ ಮಕ್ಕಳಿಗೆ ಹಿಂಸೆ: ಬೇಬಿ ಕೇರ್ ಸೆಂಟರ್ ಕ್ರೂರತನ ಬಯಲಿಗೆ – Kannada News | Baby Care Centre Cruelty Exposed: Toddlers Allegedly Put Inside Washing Machine

ಬೆಂಗಳೂರು, ಜುಲೈ 01: ನಗರದ ಐಟಿ ಕಂಪನಿಯೊಂದರ ಆವರಣದಲ್ಲಿರುವ ಡೇ-ಕೇರ್ ಕೇಂದ್ರದಲ್ಲಿ (Baby care center) ಎರಡು ವರ್ಷದ ಪುಟ್ಟ ಮಕ್ಕಳಿಗೆ ದೈಹಿಕ ಹಿಂಸೆ, ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಕ್ಕಳಿಗೆ ದೈಹಿಕ ಹಿಂಸೆ ನೀಡುವ ವಿಡಿಯೋಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿವೆ. ಆ ಬೆನ್ನಲ್ಲೇ ಮಕ್ಕಳ ಸಹಾಯವಾಣಿಗೆ ಈ ಬಗ್ಗೆ ದೂರು ಬಂದಿದೆ. ಸದ್ಯ ಡೇ-ಕೇರ್​ ಕೇಂದ್ರದ ಐವರು ಆಯಾಗಳ ವಿರುದ್ಧ ಹೆಚ್​ಎಎಲ್​ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಆಯಾಗಳಿಂದ ಮಕ್ಕಳಿಗೆ ದೈಹಿಕ ಹಿಂಸೆ

ಹೆಚ್‌ಎಎಲ್ ಕ್ಯಾಂಪಸ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ ಕ್ಯಾಪ್‌ಜೆಮಿನಿ ಆವರಣದಲ್ಲಿರುವ ಬ್ರೂಕ್​ಫೀಲ್ಡ್​​ನಲ್ಲಿರೋ ಸೊಸೈಟಿ ಜನರಲ್ ಬೇಬಿ ಕೇರ್ ಸೆಂಟರ್​ನಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ತಮ್ಮ ಪುಟ್ಟ ಮಕ್ಕಳನ್ನು ನೋಡಿಕೊಳ್ಳಲು ಈ ಸೆಂಟರ್​ನಲ್ಲಿ ಬಿಟ್ಟು ಹೋಗುತ್ತಾರೆ. ಆದರೆ, ಅಲ್ಲಿನ ಆಯಾಗಳು ಮಾತ್ರ ಮಕ್ಕಳ ಮೇಲೆ ಮೃಗೀಯ ವರ್ತನೆ ತೋರಿದ್ದಾರೆ. ಮಕ್ಕಳು ಅಳುವಾಗ ಅಥವಾ ಗಲಾಟೆ ಮಾಡಿದಾಗ ಹಿಂಸೆ ನೀಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಕ್ಕಳನ್ನ ವಾಷಿಂಗ್ ಮಷಿನ್ ಒಳಗಡೆ ಹಾಕುವ ಸಿಬ್ಬಂದಿ

ಇನ್ನು ವೈರಲ್ ಆಗಿರುವ ವಿಡಿಯೋ ಮತ್ತಷ್ಟು ಭಯಾನಕವಾಗಿವೆ. ಮಕ್ಕಳನ್ನು ವಾಷಿಂಗ್ ಮಷಿನ್ ಒಳಗಡೆ ಹಾಕಿರುವುದು, ಬಲವಂತವಾಗಿ ಟಾಯ್ಲೆಟ್ ಜೆಟ್ ಸ್ಪ್ರೇ ಪೈಪ್​​ ಮೂಲಕ ನೇರವಾಗಿ ಮಕ್ಕಳ ಬಾಯಿಗೆ ತುರುಕಿ ನೀರು ಬಿಡುವ ಮೂಲಕ ಅತ್ಯಂತ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಶೌಚಾಲಯದೊಳಗೆ ಕೂಡಿ ಹಾಕುವುದಲ್ಲದೆ ಕಿರುಚಾಡದಂತೆ ಹೆದರಿಸಿದ್ದಾರೆ. ಆಯಾಗಳ ಈ ಕ್ರೂರ ಕೃತ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಮಕ್ಕಳು ಭಯದಿಂದ ಅಳುತ್ತಿರುವ ವಿಡಿಯೋಗಳು ವೈರಲ್ ಆಗಿವೆ.

ಇದನ್ನೂ ಓದಿ: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, 17 ಪೆಡ್ಲರ್‌ಗಳ ಬಂಧನ

ವಿಡಿಯೋಗಳು ವೈರಲ್​ ಬೆನ್ನಲ್ಲೇ ಮಕ್ಕಳ ಸಹಾಯವಾಣಿಗೆ ದೂರು ಬಂದಿದೆ. ಚೈಲ್ಡ್ ಹೆಲ್ಪ್‌ಲೈನ್ ನೀಡಿದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು, ಐವರು ಆಯಾಗಳ ವಿರುದ್ಧ ಬಿಎನ್​​ಎಸ್​ ಮತ್ತು ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಹೆಚ್​ಎಎಲ್ ಪೊಲೀಸರು ವಿಡಿಯೋ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *