ಪ್ರಾತಿನಿಧಿಕ ಚಿತ್ರImage Credit source: Getty images
ಬೆಂಗಳೂರು, ಜೂನ್ 04: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ (fine) ಪಾವತಿಗೆ ಮತ್ತೆ ಶೇ 50% ವಿನಾಯಿತಿಗೆ ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ (Karnataka Government) ಗುಡ್‌ನ್ಯೂಸ್ ನೀಡಲಾಗಿದೆ. ಜೂನ್ 21ರಿಂದ ಜುಲೈ 10ರವರೆಗೆ ಅಂದರೆ 20 ದಿನಗಳ ಕಾಲಾವಕಾಶ ನೀಡಿ ಆದೇಶ ಹೊರಡಿಸಲಾಗಿದೆ.
ಮುಖ್ಯಾಂಶಗಳು
- ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್
- ಸಂಚಾರ ದಂಡದ ಮೊತ್ತದಲ್ಲಿ ಮತ್ತೆ ಶೇ 50ರಷ್ಟು ವಿನಾಯಿತಿ ನೀಡಿದ ರಾಜ್ಯ ಸರ್ಕಾರ
- ಜೂನ್ 21ರಿಂದ ಜುಲೈ 10ರವರೆಗೆ ದಂಡ ಪಾವತಿಸಲು ಅವಕಾಶ
ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಲಾಗದೆ ಪರದಾಡುತ್ತಿದ್ದ ಸವಾರರ ಹಿತದೃಷ್ಟಿಯಿಂದ, ಬಾಕಿ ಇರುವ ದಂಡದ ಮೊತ್ತದಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆ ಮತ್ತೆ ಶೇಕಡಾ 50ರಷ್ಟು ರಿಯಾಯಿತಿ ಘೋಷಿಸಿದೆ.
ಇದನ್ನೂ ಓದಿ: ತಪ್ಪು ಮಾಡಿದ್ರೆ ದಂಡ ಹಾಕಿ, ಕೈ ಮಾಡುವ ಹಕ್ಕಿಲ್ಲ: ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಟ್ರಾಫಿಕ್ ಪೊಲೀಸರ ದೌರ್ಜನ್ಯ
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ಗಳಲ್ಲಿ 2026ರ ಮೇ ತಿಂಗಳಿಗಿಂತ ಮೊದಲು ದಾಖಲಾಗಿರುವ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991ರಿಂದ 2022ರವರೆಗಿನ ಸುದೀರ್ಘ ಅವಧಿಯಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಅರ್ಧದಷ್ಟು ವಿನಾಯಿತಿ ನೀಡಲಾಗಿದೆ. ಈ ಸುದೀರ್ಘ ಅವಧಿಯ ಸಂಚಾರ ನಿಯಮ ಉಲ್ಲಂಘನೆ ದಂಡದ ಬಾಕಿಯನ್ನು ಸವಾರರು ಸುಲಭವಾಗಿ ಪಾವತಿಸಲು ಇದೇ ಜೂನ್ 21ರಿಂದ ಜುಲೈ 10ರವರೆಗೆ ಒಟ್ಟು 20 ದಿನಗಳ ಕಾಲಾವಕಾಶ ನೀಡಲಾಗಿದೆ.
ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ: ರೈತರ ‘ವಿಧಾನಸೌಧ ಚಲೋ’ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ರಸ್ತೆ ಬಂದ್ ಭೀತಿ
ವಾಹನ ಸವಾರರು ತಮ್ಮ ಬಾಕಿ ದಂಡದ ಮೊತ್ತವನ್ನು ಸುಲಭವಾಗಿ ಪಾವತಿಸಲು ಸರ್ಕಾರ ಹಲವು ಆಯ್ಕೆಗಳನ್ನು ನೀಡಿದೆ. ಸಾರ್ವಜನಿಕರು ಅಸ್ತ್ರಂ ಆ್ಯಪ್, ಕೆಎಸ್‌ಪಿಎಸ್ ಆ್ಯಪ್ ಹಾಗೂ ರಾಜ್ಯಾದ್ಯಂತ ಇರುವ ಕರ್ನಾಟಕ ಒನ್ ಕೇಂದ್ರಗಳು ಸೇರಿದಂತೆ ಅಧಿಕೃತ ಡಿಜಿಟಲ್ ವೇದಿಕೆಗಳ ಮೂಲಕ ಶೇಕಡಾ 50ರಷ್ಟು ವಿನಾಯಿತಿಯ ದಂಡವನ್ನು ಪಾವತಿಸಬಹುದಾಗಿದೆ. ಕಳೆದ ವರ್ಷ ನವೆಂಬರ್ನಲ್ಲಿ ಕೂಡ ಶೇಕಡಾ 50ರಷ್ಟು ವಿನಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.