ದೆಹಲಿ, ಆ.8: ನವದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಯುವಜನತೆಯ ಸಾಮರ್ಥ್ಯದ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ನಮಗೆ ನಿಮ್ಮ ಮೇಲೆ ನಂಬಿಕೆಯಿದೆ. ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ದೇಶಕ್ಕೆ ನಿಮ್ಮ ಅಗತ್ಯವಿದೆ” ಎಂದು ಯುವ ಪೀಳಿಗೆಗೆ ಕರೆ ನೀಡಿದ್ದಾರೆ.
ಖ್ಯಾತ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ನವದೆಹಲಿಯ ವಾರ್ಷಿಕ ಪದವಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿಯವರು ಶನಿವಾರ ಮಾತನಾಡಿದರು. ಪ್ರತಿಯೊಂದು ಪೀಳಿಗೆಗೂ ಅದರದ್ದೇ ಆದ ರಾಷ್ಟ್ರೀಯ ಜವಾಬ್ದಾರಿ ಇರುತ್ತದೆ. ಮುಂದಿನ 30 ರಿಂದ 35 ವರ್ಷಗಳಲ್ಲಿ ನೀವು ಕೈಗೊಳ್ಳುವ ಪ್ರತಿ ನಿರ್ಧಾರವೂ ದೇಶದ ಹಿತಾಸಕ್ತಿ ಹಾಗೂ ರಾಷ್ಟ್ರದ ಅಗತ್ಯಗಳನ್ನು ಪೂರೈಸುವಂತಿರಬೇಕು ಎಂದು ಮೋದಿ ಹೇಳಿದರು.
ಇಲ್ಲಿದೆ ನೋಡಿ ವಿಡಿಯೋ:
ವೇಗವಾಗಿ ಬದಲಾಗುತ್ತಿರುವ ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ. ಜಾಗತಿಕ ಕಾರ್ಯತಂತ್ರ ಮತ್ತು ಜಾಗತಿಕ ಶಕ್ತಿಯ ಸಮತೋಲನ ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಹೊಸ ಬದಲಾವಣೆಗಳಿಗೆ ತಕ್ಕಂತೆ ಕಲಿಯುತ್ತಾ ಸಾಗುವವರು ಮಾತ್ರ ಅಂತಿಮವಾಗಿ ಯಶಸ್ಸು ಸಾಧಿಸುತ್ತಾರೆ ಎಂದು ಪ್ರತಿಪಾದಿಸಿದರು. ‘ಸ್ಕೈರೂಟ್’ ಸಂಸ್ಥೆಯ ‘ವಿಕ್ರಮ್-1’ ರಾಕೆಟ್‌ನ ಯಶಸ್ಸುನ್ನು ಉಲ್ಲೇಖಿಸಿದ ಅವರು, ಸರ್ಕಾರವು ಯುವಕರ ಕೊಡುಗೆಗಾಗಿ ಹಲವು ಹೊಸ ಕ್ಷೇತ್ರಗಳನ್ನು ಮುಕ್ತಗೊಳಿಸಿದೆ. ಬಾಹ್ಯಾಕಾಶ ಕ್ಷೇತ್ರವು ಇಂದು ಯುವಕರಿಗೆ ಅಗಾಧ ಅವಕಾಶಗಳನ್ನು ತೆರೆದಿಟ್ಟಿದೆ.
ಇದನ್ನೂ ಓದಿ: ಕೈಮಗ್ಗದ ಬಟ್ಟೆ ಖರೀದಿಸಿ ಒಡಿಶಾದ ಹ್ಯಾಂಡ್ಲೂಮ್ ಪರಂಪರೆ ಬೆಂಬಲಿಸಿದ ಸಚಿವ ಪ್ರಲ್ಹಾದ್ ಜೋಶಿ
ದೇಶದಲ್ಲಿ ಡ್ರೋನ್ ಕ್ಷೇತ್ರವೂ ವೇಗವಾಗಿ ವಿಸ್ತರಿಸುತ್ತಿದ್ದು, ರಾಷ್ಟ್ರೀಯ ಭದ್ರತೆ ಮತ್ತು ಔಷಧ ಸಾಗಣೆಯಲ್ಲಿ ಡ್ರೋನ್‌ಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 1:03 pm, Sat, 8 August 26