ವಿಜಯಪುರ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಸೇರಿದಂತೆ ತಾಯಿಯೂ ಸಾವು – Kannada News | Three Family Members death in Tragic Car Accident on NH 50 Near Managuli

ವಿಜಯಪುರ, ಜುಲೈ 10: ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ (Accident) ಹೊಡೆದ ಪರಿಣಾಮ, ಇಬ್ಬರು ಪುತ್ರರು ಸೇರಿದಂತೆ ತಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ (death) ಘಟನೆ ವಿಜಯಪುರ (vijayapura) ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಾಯಿ ಸತ್ಯವೇಣಿ(38), ಪುತ್ರರಾದ ಹರಿವೆಂಕಟರಾಮ್(20) ಮತ್ತು ಜಶ್ವಂತ(18) ಮೃತರು. ತಂದೆ ರಾಘವೇಂದ್ರ(41)ಗೆ ಗಂಭೀರ ಗಾಯವಾಗಿದೆ.

ನಿದ್ದೆಯ ಮಂಪರೇ ದುರಂತಕ್ಕೆ ಕಾರಣ?

ಕುಟುಂಬವು ಕೊಪ್ಪಳ ಜಿಲ್ಲೆಯ ಕಾರಟಗಿಯಿಂದ ಶಿರಡಿಗೆ ಹೊರಟಿದ್ದರು. 20 ವರ್ಷದ ಮಗ ಹರಿವೆಂಕಟರಾಮ್​​ ಕಾರು ಚಲಾಯಿಸುತ್ತಿದ್ದ. ಈ ವೇಳೆ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ: ವಿಡಿಯೋ ವೈರಲ್

ಇನ್ನು ಘಟನಾ ಸ್ಥಳಕ್ಕೆ ಮನಗೂಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಾರಿಗೆ ಡಿಕ್ಕಿ ಹೊಡೆದ ಲಾರಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಲಾರಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಹೊರವಲಯದಲ್ಲಿರುವ ಹೈಕೋರ್ಟ್ ಕ್ರಾಸ್ ಬಳಿ ಘಟನೆ ನಡೆದಿದೆ. ವೇಗವಾಗಿ ಬಂದು ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜುಗುಜ್ಜಾಗಿದೆ.

ಇದನ್ನೂ ಓದಿ: ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್: ಎಂಟು ಮಕ್ಕಳಿಗೆ ಗಾಯ

ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಶಾಲೂ ಸೇರಿ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕಲಬುರಗಿ ಟ್ರಾಫಿಕ್-01 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:53 pm, Fri, 10 July 26

Source link

Leave a Reply

Your email address will not be published. Required fields are marked *