
ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಬರುತ್ತಿದೆ. ಟೀಸರ್ ನೋಡಿದವರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ರೀತಿ ಭಾಸವಾಗಿದೆ. ಈ ಪ್ರಕರಣದ ಬಗ್ಗೆ ಚಿತ್ರದ ನಿರ್ದೇಶಕ ಲವ ಮಾತನಾಡಿದ್ದಾರೆ. ‘ಈ ಚಿತ್ರಕ್ಕೂ ದರ್ಶನ್ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಲವ ಹೇಳಿದ್ದಾರೆ. ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಿನಿಮಾ ನೋಡ್ತಾರೆ ಎಂದರೆ ಅವರಿಗೆ ಚಿತ್ರ ತೋರಿಸೋಕೆ ರೆಡಿ ಎಂದು ಲವ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.