ವಿಜಯ ಹಝಾರೆ ಟೂರ್ನಿಯಲ್ಲಿ ‘ವಿದರ್ಭ’ ಚಾಂಪಿಯನ್ಸ್ – Kannada News | Vidarbha to maiden Vijay Hazare Trophy title

ದೇಶೀಯ ಏಕದಿನ ಪಂದ್ಯಾವಳಿ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಬಿಸಿಸಿಐ ಸಿಒಇ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ವಿದರ್ಭ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿದ್ದರು.

318 ರನ್​ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ ತಂಡವು 48.5 ಓವರ್​ಗಳಲ್ಲಿ 279 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ವಿದರ್ಭ ತಂಡವು 38 ರನ್​ಗಳ ಜಯ ಸಾಧಿಸಿದೆ. ವಿಶೇಷ ಎಂದರೆ ಇದು ವಿದರ್ಭ ತಂಡದ ಚೊಚ್ಚಲ ವಿಜಯ ಹಝಾರೆ ಟ್ರೋಫಿ. ಅಂದರೆ ಇದೇ ಮೊದಲ ಬಾರಿಗೆ ದೇಶೀಯ ಏಕದಿನ ಟೂರ್ನಿಯಲ್ಲಿ ವಿದರ್ಭ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

 

Source link

Leave a Reply

Your email address will not be published. Required fields are marked *