ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ!
ಕೊಡಗು, ಏಪ್ರಿಲ್ 22: ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ
ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ವೃಜೇಶ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ