ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ! 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ! 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು, ಮಾರ್ಚ್​ 21: ತಾಲೂಕಿನ ಕೊಡಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KSRTC) ಬಸ್ ಪಲ್ಟಿಯಾದ ಘಟನೆ ನಡೆದಿದೆ. ಕುಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *