ವಿಧಾನಸೌಧದ ಮುಂದೆ ಫ್ರೀಡಂ ಹಬ್ಬ: ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಸಂಚಾರಿಸಬೇಡಿ – Kannada News | Bengaluru Prepares for 80th Independence Day Freedom Habba at Vidhana Soudha with Road Restrictions.

ಬೆಂಗಳೂರು, ಆ.15: 2026ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂದೆ ಫ್ರೀಡಂ ಹಬ್ಬವನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯುವ ಈ ಹಬ್ಬದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. 80ನೇ ಸ್ವಾತಂತ್ರ್ಯೋತ್ಸವದ ಈ ವಿಶೇಷ ಆಚರಣೆಗಾಗಿ ಈಗಾಗಲೇ ಭರದ ಸಿದ್ಧತೆಗಳು ನಡೆದಿವೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಹಿನ್ನೆಲೆಯಲ್ಲಿ, ವಾಹನ ಸವಾರರಿಗೆ ತೊಂದರೆಯಾಗದಂತೆ ವಿಧಾನಸೌಧದ ಸುತ್ತಮುತ್ತಲ ಸಂಚಾರ ಮಾರ್ಗಗಳನ್ನು ಮಾರ್ಪಾಡು ಮಾಡಲಾಗಿದೆ. ವಿಧಾನಸೌಧದ ಮುಂಭಾಗದ ಎರಡು ಬದಿ ರಸ್ತೆಗಳಲ್ಲಿ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಅಂಬೇಡ್ಕರ್ ರಸ್ತೆ ಮೂಲಕ ಕೆ.ಆರ್. ಸರ್ಕಲ್ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ಆಗಮನವಿರುವ ಕಾರಣ, ಅಂಬೇಡ್ಕರ್ ರಸ್ತೆಯಲ್ಲಿ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಕೃಷ್ಣಭೈರೇಗೌಡರು ಕಾರ್ಯಕ್ರಮದ ಸಿದ್ಧತೆಗಳನ್ನು ಖುದ್ದು ಪರಿಶೀಲಿಸಿದ್ದಾರೆ. ವಿಧಾನಸೌಧದ ಮುಂದೆ 180ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಅಳವಡಿಸಲಾಗಿದ್ದು, ವಿವಿಧ ರಾಜ್ಯಗಳ ಸಂಸ್ಕೃತಿ ಮತ್ತು ಆಹಾರ ಶೈಲಿಗಳನ್ನು ಪ್ರದರ್ಶಿಸುವ ಉದ್ದೇಶವಿದೆ. ಈ ಹಬ್ಬಕ್ಕೆ QR ಕೋಡ್ ಮೂಲಕ ಮಾತ್ರ ಪ್ರವೇಶವಿರುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *