ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ!
ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 12:31 pm, Sat, 24 January 26
