ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆಗೂ ತಡೆಯಾಜ್ಞೆ: ಯೋಗೀಶ್ ಗೌಡರ್ ಕೊಲೆ ಕೇಸ್​ನಲ್ಲಿ ಬಿಗ್ ರಿಲೀಫ್ – Kannada News | Vinay Kulkarni Gets Bail in Yogesh Gowda Murder Case: Possibility of getting another chance for the MLA

ಯೋಗೀಶ್ ಗೌಡರ್ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನುImage Credit source: tv9

ಬೆಂಗಳೂರು, ಜುಲೈ 31: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda Murder Case) ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. 5 ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್​ ಆದೇಶಿಸಿದೆ. ಇದೇ ವೇಳೆ ವಿನಯ್ ಕುಲಕರ್ಣಿ ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ತಡೆಯಾಜ್ಞೆ ನೀಡಲಾಗಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಮೂಡಿದೆ.

(ಮಾಹಿತಿ ಅಪ್​ಡೇಟ್ ಆಗಲಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:56 am, Fri, 31 July 26

Source link

Leave a Reply

Your email address will not be published. Required fields are marked *