ಬಾಗಲಕೋಟೆ, ಜೂನ್ 30: ಸಚಿವ ಎಂ.ಬಿ. ಪಾಟೀಲ್ ಅವರು ಬಾಗಲಕೋಟೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯ ಸಂದರ್ಭದಲ್ಲಿ ಹೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಸಭೆಗೆ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ (EE) ಗೈರಾದ ವಿಚಾರ ಗಮನಕ್ಕೆ ಬಂದ ಕೂಡಲೇ, ನಿಮ್ಮ ಅಧಿಕಾರಿ ಯಾಕೆ ಸಭೆಗೆ ಬಂದಿಲ್ಲ ಎಂದು ಪ್ರಶ್ನಿಸಿ ಸಚಿವರು ಸಿಟ್ಟಾಗಿದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ನೀರು ಸರಬರಾಜಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆ ಹೆಸ್ಕಾಂ ಅಧಿಕಾರಿಗಳನ್ನು ಸಚಿವರು ತರಾಟೆಗೆ ಪಡೆದಿದ್ದು, ಒಂದೂವರೆ ತಿಂಗಳಾದರೂ ಆರ್. ಆರ್. ನಂಬರ್ ಕೊಟ್ಟಿಲ್ಲ. ಒಂದೂವರೆ ವರ್ಷದಿಂದ ಹೀಗೆ ಕೆಲಸ ಮಾಡ್ತಿದಿರಾ ಎಂದು ಹೇಳಿದ ಎಂ.ಬಿ. ಪಾಟೀಲ್, ಈ ಸಂಬಂಧ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
