ಬೆಂಗಳೂರು, ಏ.20: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ FLY91 ವಿಮಾನ (ATR ಟರ್ಬೊಪ್ರಾಪ್ AT7) ಮಧ್ಯಮಾರ್ಗದಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಗಿತ್ತು. ಈ ಘಟನೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾದರು. ಹಲವು ಪ್ರಯಾಣಿಕರು ಭಯದಿಂದ ಅಳುತ್ತಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಕುಳಿತಿದ್ದರು.ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ವಿಮಾನ ಆಕಾಶದಲ್ಲಿ ಸುತ್ತಾಡಿ, ಲ್ಯಾಂಡಿಂಗ್‌ಗಾಗಿ ಸೂಕ್ತ ಸ್ಥಳವನ್ನು ಹುಡುಕುತ್ತಿತ್ತು. ವಿಮಾನ ಸಿಬ್ಬಂದಿ ಮತ್ತು ಪೈಲಟ್‌ಗಳು ಪ್ರಯಾಣಿಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು, ಸುರಕ್ಷತೆಯು ಪ್ರಮುಖ ಆದ್ಯತೆ ಎಂದು ಭರವಸೆ ನೀಡಿದರು. ಹವಾಮಾನ ಪರಿಸ್ಥಿತಿಗಳು ಮತ್ತು ಲಭ್ಯವಿರುವ ಇಂಧನದ ಬಗ್ಗೆಯೂ ಮಾಹಿತಿ ನೀಡಿದರು. ವಿಮಾನವು ಇನ್ನೂ 30 ರಿಂದ 45 ನಿಮಿಷಗಳ ಹಾರಾಟ ಸಾಮರ್ಥ್ಯವನ್ನು ಹೊಂದಿದೆ ಎಂದು ತಿಳಿಸಲಾಗಿತ್ತು. ಸಕಾಲಿಕ ನಿರ್ಧಾರದ ನಂತರ, ವಿಮಾನವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ಘಟನೆಯಿಂದ ಪ್ರಯಾಣಿಕರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರೂ, ಅಂತಿಮವಾಗಿ ಎಲ್ಲರೂ ಸುರಕ್ಷಿತವಾಗಿ ನೆಲವನ್ನು ತಲುಪಿ ನಿಟ್ಟುಸಿರು ಬಿಟ್ಟರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ