IPL 2026: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಇದೀಗ ಈ ಗಾಯದ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಹಿಮ್ಮಡಿ ನೋವಿಗೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಈಗ ಆರಾಮಾಗಿದ್ದಾರೆ. ಅಂದರೆ ಗಾಯದ ಸಮಸ್ಯೆಯು ಗಂಭೀರವಲ್ಲ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಹೇಳಿದ್ದಾರೆ.
ಆರ್ಸಿಬಿ ತಂಡಕ್ಕೆ ಸತತ ಪಂದ್ಯಗಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಚೇತರಿಸಿಕೊಂಡಿರುವ ಕಾರಣ ಮುಂದಿನ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯವಿರಲಿದ್ದಾರೆ ಎಂದು ರಜತ್ ಪಾಟಿದಾರ್ ಸ್ಪಷ್ಟಪಡಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಆಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಕೊಹ್ಲಿ ಪೂರ್ಣ ಪ್ರಮಾಣದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.
