ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಬೆತ್ ಮೂನಿ (Beth Mooney) ಜಾಗತಿಕ ಕ್ರಿಕೆಟ್ನಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಐತಿಹಾಸಿಕ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ. (PC: Gettyimages)
ಭಾನುವಾರ (ಜುಲೈ 5, 2026) ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಅಬ್ಬರಿಸಿದ ಬೆತ್ ಮೂನಿ 49 ಎಸೆತಗಳಲ್ಲಿ 10 ಫೋರ್ಗಳೊಂದಿಗೆ 64 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಮೂನಿ, ಪುರುಷರ ಮತ್ತು ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಟಿ20 ವಿಶ್ವಕಪ್ ಫೈನಲ್ ಪಂದ್ಯಗಳಲ್ಲಿ ಮೂರು ಬಾರಿ ಹಾಫ್ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ಕ್ರಿಕೆಟರ್ ಎನಿಸಿಕೊಂಡಿದ್ದಾರೆ. (PC: Gettyimages)
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2014ರ ಟಿ20 ವಿಶ್ವಕಪ್ ಫೈನಲ್ನಲ್ಲಿ 77 ರನ್ ಬಾರಿಸಿದ್ದರು. ಹಾಗೆಯೇ 2024 ರಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ 76 ರನ್ ಕಲೆಹಾಕಿದ್ದರು. ಈ ಮೂಲಕ ಟಿ20 ವಿಶ್ವಕಪ್ ಫೈನಲ್ಗಳಲ್ಲಿ 2 ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದರು. (PC: Gettyimages)
ಇದೀಗ ಈ ವಿಶ್ವ ದಾಖಲೆಯನ್ನು ಬೆತ್ ಮೂನಿ ಮುರಿದಿದ್ದಾರೆ. 2020ರ ಟಿ20 ವಿಶ್ವಕಪ್ ಫೈನಲ್ನಲ್ಲಿ 78 ರನ್ ಬಾರಿಸಿದ್ದ ಮೂನಿ, 2023ರ ಟಿ20 ವರ್ಲ್ಡ್ಕಪ್ ಫೈನಲ್ನಲ್ಲಿ 74* ಸಿಡಿಸಿದ್ದರು. ಇದೀಗ 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ 64 ರನ್ ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಫೈನಲ್ನಲ್ಲಿ 3 ಅರ್ಧಶತಕ ಸಿಡಿಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: Gettyimages)
ಬೆತ್ ಮೂನಿ ಅವರ ಈ ಭರ್ಜರಿ ಪ್ರದರ್ಶನದ ಫಲವಾಗಿ ಫೈನಲ್ ಪಂದ್ಯದ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಹಾಗೆಯೇ ಈ ಬಾರಿಯ ವಿಶ್ವಕಪ್ನಲ್ಲಿ 7 ಇನಿಂಗ್ಸ್ಗಳಿಂದ 238 ರನ್ ಕಲೆಹಾಕುವ ಮೂಲಕ 'ಸರಣಿ ಶ್ರೇಷ್ಠ' ಪ್ರಶಸ್ತಿಯನ್ನೂ ಕೂಡ ತಮ್ಮದಾಗಿಸಿಕೊಂಡರು. (PC: Gettyimages)




