ರಾಮನಗರ, ಜುಲೈ 17: ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರು ಮತ್ತು ವಿಪಕ್ಷಗಳ ಹೋರಾಟದ ನಡುವೆಯೇ ಯೋಜನೆಯ ಪರವಾಗಿರುವ ರೈತರು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಕಚೇರಿಯಲ್ಲಿ ಭೂ ಪರಿಹಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಸೇರಿದಂತೆ ನಾಲ್ಕು ಗ್ರಾಮಗಳ ಭೂಸ್ವಾಧೀನಕ್ಕೆ ಆದೇಶಿಸಲಾಗಿದ್ದು, ಈ ರೈತರು ತಮ್ಮ ಭೂಮಿಯನ್ನು ನೀಡಲು ಸಿದ್ಧರಿದ್ದು, ಘೋಷಿತ ಪರಿಹಾರವನ್ನು ಪಡೆಯಲು ಮುಂದಾಗಿದ್ದಾರೆ. ಪ್ರಸ್ತುತ ಪ್ರತಿ ಎಕರೆಗೆ 2 ಕೋಟಿ ರೂ.ನಿಂದ 2.17 ಕೋಟಿ ರೂ.ವರೆಗೆ ಪರಿಹಾರ ನಿಗದಿಪಡಿಸಲಾಗಿದೆ. ರೈತರು ತಮ್ಮ ಜಮೀನಿನ ಮಾಲೀಕತ್ವದ ದಾಖಲೆಗಳು, ಆಧಾರ್ ಕಾರ್ಡ್, ಪಾಣಿ, ವಂಶವೃಕ್ಷ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸುತ್ತಿದ್ದಾರೆ. ಅಧಿಕಾರಿಗಳು ಕೂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
