ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!

ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!

ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್​ಗಳಿಂದ ಸೋಲಿಸಿ ಭಾರತ ತಂಡ ವಿಶ್ವಕಪ್ ಅನ್ನು ಎತ್ತಿ ಹಿಡಿದಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್​ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಟೀಮ್ ಇಂಡಿಯಾದ ಈ ನಡೆಗೆ ಭಾರತ ತಂಡದ ಮಾಜಿ ಆಟಗಾರ ಕೀರ್ತಿ ಆಝಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾ ನಾಚಿಕೆಗೇಡು…  1983 ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ನಾವು ವಿಶ್ವಕಪ್ ಗೆದ್ದಾಗ, ನಮ್ಮ ತಂಡದಲ್ಲಿ ಹಿಂದೂ, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್ ಆಟಗಾರರು ಇದ್ದರು. ನಾವು ಟ್ರೋಫಿಯನ್ನು ನಮ್ಮ ಧಾರ್ಮಿಕ ಜನ್ಮಸ್ಥಳವಾದ ನಮ್ಮ ಮಾತೃಭೂಮಿ ಭಾರತ ಅಥವಾ ಹಿಂದೂಸ್ತಾನ್‌ಗೆ ತಂದಿದ್ದೆವು.

ಇದೀಗ ಏಕೆ ಟ್ರೋಫಿಯನ್ನು ದೇವಸ್ಥಾನಕ್ಕೆ ಎತ್ತಕೊಂಡು ಹೋಗಿದ್ದಾರೆ? ಅದೇ ಯಾಕೆ ಮಸೀದಿಗೆ ಅಥವಾ ಚರ್ಚ್​ ಇಲ್ಲಾ ಗುರುದ್ವಾರಗೆ ತೆಗೆದುಕೊಂಡು ಹೋಗಿಲ್ಲ. ಈ ತಂಡ ಭಾರತವನ್ನು ಪ್ರತಿನಿಧಿಸುತ್ತದೆ. ಇದರ ಬದಲಾಗಿ ಸೂರ್ಯ ಕುಮಾರ್ ಯಾದವ್ ಅಥವಾ ಜಯ್ ಶಾ ಅವರ ಕುಟುಂಬವಲ್ಲ!

ಇದೇ ವಿಶ್ವಕಪ್ ತಂಡದಲ್ಲಿದ್ದ ಮೊಹಮ್ಮದ್ ಸಿರಾಜ್ ಟ್ರೋಫಿಯನ್ನು ಮಸೀದಿಗೆ ಎತ್ತುಕೊಂಡು ಹೋಗಿಲ್ಲ. ಅದರಲ್ಲೂ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ, ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದ ಸಂಜು ಸ್ಯಾಮ್ಸನ್​​ ಚರ್ಚ್​ಗೆ ತೆಗೆದುಕೊಂಡು ಹೋಗಲಿಲ್ಲ.

ಈ ಟ್ರೋಫಿಯು 1.4 ಬಿಲಿಯನ್ ಭಾರತೀಯರಿಗೆ ಸೇರಿದೆ. ಇದು ಒಂದು ಧರ್ಮದ ವಿಜಯೋತ್ಸವವಲ್ಲ! ಎಂದು ಕೀರ್ತಿ ಆಝಾದ್ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಕೀರ್ತಿ ಆಝಾದ್ ಅವರ ಈ ಅಭಿಪ್ರಾಯಕ್ಕೆ ಪರ-ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಹೆಚ್ಚಿನವರು ಆಝಾದ್ ಅವರ ಅಭಿಪ್ರಾಯಕ್ಕೆ ಸಹಮತಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕ್ರೀಡೆಗೂ ಧರ್ಮಲೇಪನ ಮಾಡಲು ಹೊರಟ್ಟಿದ್ದಾರೆ ಎಂದು ಕೆಲವರು ಟೀಕಿಸಿದ್ದಾರೆ.

ಒಟ್ಟಿನಲ್ಲಿ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಐಸಿಸಿ ಅಧ್ಯಕ್ಷ ಜಯ್ ಶಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಟ್ರೋಫಿಯೊಂದಿಗೆ ದೇವಸ್ಥಾನಕ್ಕೆ ತೆರಳಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಈ ಚರ್ಚೆಯ ನಡವೆ ಕೀರ್ತಿ ಆಝಾದ್ ಮುಂದಿಟ್ಟಿರುವ ಪ್ರಶ್ನೆ ಮುನ್ನಲೆಗೆ ಬಂದಿದೆ.

ಇದನ್ನೂ ಓದಿ: ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ

ಅಂದಹಾಗೆ ಕೀರ್ತಿ ಆಝಾದ್​ 1983 ರಲ್ಲಿ ಏಕದಿನ ವಿಶ್ವಕಪ್​ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು. ಅಲ್ಲದೆ ಟೀಮ್ ಇಂಡಿಯಾ ಪರ 25 ಏಕದಿನ ಹಾಗೂ 7 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಇದೀಗ ಟೀಮ್ ಇಂಡಿಯಾ ನಡೆಯನ್ನು ಪ್ರಶ್ನಿಸುವ ಮೂಲಕ ಕೀರ್ತಿ ಆಝಾದ್​ ಹೊಸ ಚರ್ಚೆಗೆ ನಾಂದಿಯಾಡಿದ್ದಾರೆ.

 

Source link

Leave a Reply

Your email address will not be published. Required fields are marked *