ವೀಕೆಂಡ್, ಬೇಸಿಗೆ ರಜೆ ಎಫೆಕ್ಟ್​​: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಸಾಗರ

ಮಂಗಳೂರು, ಮೇ 24: ವೀಕೆಂಡ್ ಹಾಗೂ ಬೇಸಿಗೆ ರಜೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಶ್ರೀ ಮಂಜುನಾಥ ಸ್ವಾಮಿಯ ನೆಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನಕ್ಕೆ ಮತ್ತು ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಕುಟುಂಬ ಸಮೇತ ಆಗಮಿಸಿದ ಭಕ್ತರಿಂದ ದೇವಾಲಯಗಳ ಆವರಣದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜಂಗುಳಿ ನಿರ್ಮಾಣವಾಗಿದೆ. ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ವಿವಿಧ ಪೂಜಾ ಸೇವೆಗಳನ್ನು ಪಡೆಯಲು ಭಕ್ತರು ಮುಗಿಬಿದ್ದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲೂ ಇದೇ ರೀತಿಯ ಜನಸಂದಣಿ ಕಂಡುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *