ವೇಗವಾಗಿ ಹೋಗುತ್ತಿದ್ದ ಕ್ಯಾಂಟರ್ ಟೈರ್ ಸ್ಫೋಟ! ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ – Kannada News | Dwarlu Bridge Accident: KSRTC Bus Collision After Canter Tire Burst Injures Passengers

ತುಮಕೂರು, ಏ.14: ಇಂದು (ಮಂಗಳವಾರ) ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಕ್ಯಾಂಟರ್ ವಾಹನ ವೇಗವಾಗಿ ಚಲಿಸುತ್ತಿದ್ದಾಗ ದ್ವಾರಾಳು ಬ್ರಿಡ್ಜ್ ಸಮೀಪ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಕ್ಯಾಂಟರ್‌ನ ಹಿಂದೆಯೇ ಬರುತ್ತಿದ್ದ ಸರ್ಕಾರಿ ಬಸ್‌ಗೆ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ತಕ್ಷಣ ತಾವರೆಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *