ತಿರುವನಂತಪುರಂ, ಮೇ 14: ಕೇರಳ ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದ ಕೆ.ಸಿ. ವೇಣುಗೋಪಾಲ್‌ಗೆ ಒಂದು ವರ್ಷದ ಬಳಿಕ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗುವ ಭರವಸೆಯನ್ನು ಹೈಕಮಾಂಡ್ ನೀಡಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ ಮುಗಿದ ನಂತರ ವೇಣುಗೋಪಾಲ್‌ಗೆ ಈ ಪಟ್ಟ ನೀಡಲು ಚಿಂತನೆ ನಡೆಸಲಾಗುತ್ತಿದೆ. ಈ ಭರವಸೆಯ ಹಿನ್ನೆಲೆಯಲ್ಲಿ ವೇಣುಗೋಪಾಲ್ ಕೇರಳ ಸಿಎಂ ಆಗುವುದರಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಖ್ಯಮಂತ್ರಿಯಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಸತೀಶನ್ ಪರವಾಗಿ ವ್ಯಕ್ತವಾದ ಸಾರ್ವಜನಿಕ ಬೆಂಬಲ, ಸಾಮಾಜಿಕ ಜಾಲತಾಣಗಳಲ್ಲಿನ ಅಭಿಪ್ರಾಯಗಳು, ಕಾಂಗ್ರೆಸ್ ಮುಖಂಡರ ಸಲಹೆಗಳು ಹಾಗೂ ಮುಸ್ಲಿಂ ಲೀಗ್‌ನಿಂದಲೂ ಬಂದ ಬೆಂಬಲ ಈ ನಿರ್ಧಾರಕ್ಕೆ ಕಾರಣ ಎಂಬ ಮಾಹಿತಿ ಇದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
