ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್ – Kannada News | Actor Dhanveer visits jail to meet Darshan putting aside differences

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಆಪ್ತವಲಯದಲ್ಲಿ ನಟ ಧನ್ವೀರ್ ಗುರುತಿಸಿಕೊಂಡಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ದರ್ಶನ್ ಕುಟುಂಬದ ಜೊತೆ ಧನ್ವೀರ್ ಅವರಿಗೆ ಮನಸ್ತಾಪ ಉಂಟಾಗಿದೆ ಎಂಬ ಮಾತು ಕೇಳಿಬಂದಿತ್ತು. ಇತ್ತೀಚಿನ ದಿನಗಳಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲು ಧನ್ವೀರ್ (Dhanveer) ಅವರು ಜೈಲಿನ ಬಳಿ ಸುಳಿದಿರಲಿಲ್ಲ. ಆದರೆ ಈಗ ವೈಮನಸ್ಸು ಮರೆತು ಮತ್ತೆ ಜೈಲಿಗೆ ಬಂದಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ಧನ್ವೀರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಹೋಗಿರುವ ವಿಡಿಯೋ ಇಲ್ಲಿದೆ. ದರ್ಶನ್ ಅವರಿಗೆ ಜಾಮೀನು ಕೊಡಿಸಲು ಅವರ ಕುಟುಂಬದವರು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟಿ ರಕ್ಷಿತಾ ಪ್ರೇಮ್ ಅವರು ಕೂಡ ಜೈಲಿಗೆ ಭೇಟಿ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *