ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಚಾಮರಾಜನಗರ, ಮಾರ್ಚ್​ 10: ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.

ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಬೆಂಕಿ ಆಕಸ್ಮಿಕ ಘಟನೆಯೇ ಅಥವಾ ಪೂರ್ವನಿಯೋಜಿತ ಕೃತ್ಯವೇ ಎಂಬ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಅಧಿಕಾರಿಗಳು ಸಿಪಿಐ ಕಚೇರಿಯಲ್ಲಿ ಪರಿಶೀಲನೆ ನಡೆಸಿ ಬೆಂಕಿಗೆ ಕಾರಣವಾದ ಶಾರ್ಟ್ ಸರ್ಕ್ಯೂಟ್‌ನ ನಿಖರ ಕಾರಣವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *