ವಿಜಯಪುರ, ಆಗಸ್ಟ್ 12: ಸರ್ಕಾರಿ ಬಸ್ ಚಾಲಕ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಕಾರಣ ಮಾರ್ಗ ಮಧ್ಯೆ ನಿಂತಿದ್ದ ಮಕ್ಕಳನ್ನು ಕಂಡು ಸಮಸ್ಯೆ ಆಲಿಸಿದ ಸಚಿವ ಎಂ.ಬಿ.ಪಾಟೀಲ್, ಕೂಡಲೇ ವಿಭಾಗೀಯ ನಿಯಂತ್ರಣಾಧಿಕಾರಿಗೆ ಕರೆ ಮಾಡಿ ತರಾಟೆಗೆ ಪಡೆದ ಘಟನೆ ನಿನ್ನೆ ಸಂಜೆ ವಿಜಯಪುರದ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಬಳಿ ನಡೆದಿದೆ. ಚಾಲಕನ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವರು ವಿಜಯಪುರ, ಕಿಲಾರಹಟ್ಟಿ, ಮಮದಾಪುರ ಮಾರ್ಗದ ಬಸ್ ಚಾಲಕನನ್ನು ಅಮಾನತು ಮಾಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎ.ಬಿರಾದಾರಗೆ ಸೂಚನೆ ನೀಡಿದ್ದಾರೆ. ಜೊತೆಗೆ ಕೂಡಲೇ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡುವ ಜೊತೆಗೆ ಮಮದಾಪುರಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
