Headlines

ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ – Kannada News | Biklu Shiva Case: MLA Byrathi Basavaraj to Get Jayadeva Heart Treatment as Court Directs CID

ಬೆಂಗಳೂರು, ಫೆ.13: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ (Byrathi Basavaraj)​​​​​ ಅವರಿಗೆ ಚಿಕಿತ್ಸೆ ಕೊಡಿಸಲು ಕೋರ್ಟ್ ಸೂಚನೆ ನೀಡಿದೆ. ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿಐಡಿಗೆ ಸೂಚಿಸಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಭೈರತಿ ಬಸವರಾಜ್ ಅವರನ್ನು ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಯ ಅಗತ್ಯವಿದ್ದುದರಿಂದ, ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಅವರಿಗೆ ನ್ಯಾಯಾಲಯವು ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ

ಅವರನ್ನು ಹಿರಿಯ ವೈದ್ಯರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಸಬೇಕು. ಸದ್ಯ ಭೈರತಿ ಬಸವರಾಜ್ ಸಿಐಡಿ ವಶದಲ್ಲಿರುವುದರಿಂದ, ಅವರ ಸುಪರ್ದಿಯಲ್ಲೇ ಮೆಡಿಕಲ್ ಟೆಸ್ಟ್ ನಡೆಯಲಿದೆ. ವೈದ್ಯಕೀಯ ವರದಿಯೊಂದಿಗೆ ನಾಳೆ (ಶನಿವಾರ) ನ್ಯಾಯಾಧೀಶರ ನಿವಾಸದಲ್ಲಿ ಆರೋಪಿಯನ್ನು ಹಾಜರುಪಡಿಸಬೇಕು ಎಂದು ಕೂಡ ಸೂಚನೆ ನೀಡಿದೆ. ಬೌರಿಂಗ್ ಮತ್ತು ಜಯದೇವ ಆಸ್ಪತ್ರೆಯ ವೈದ್ಯಕೀಯ ವರದಿಗಳನ್ನು ಆಧರಿಸಿ ಭೈರತಿ ಬಸವರಾಜ್ ಅವರಿಗೆ ಜೈಲು ಶಿಕ್ಷೆ ಆಗಲಿದೆಯೇ ಅಥವಾ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಕಸ್ಟಡಿಗೆ ನೀಡಲಾಗುವುದೇ ಎಂಬುದು ನಾಳೆ ತೀರ್ಮಾನವಾಗಲಿದೆ.

ವರದಿ: ವಿಕಾಸ್​​​ ಕ್ರೈಂ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *