ಬೆಳಗಾವಿ, ಜನವರಿ 04: ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ, ಸವದಿ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಡಿಸಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ಎದುರು ಮತ್ತು ಡಿಸಿಸಿ ಬ್ಯಾಂಕ್ ಮುಂಭಾಗ ಎರಡೂ ಕಡೆ ಧರಣಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮತ್ತೊಂದೆಡೆ ಶಾಸಕ ಲಕ್ಷ್ಮಣ ಸವದಿ ಅವರ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ. ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಈ ವೇಳೆ ಲಕ್ಷ್ಮಣ ಸವದಿ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.