ನವದೆಹಲಿ, ಆಗಸ್ಟ್ 17: ಯುಜಿಸಿ ನೆಟ್ (UGC NET) ಪರೀಕ್ಷೆಯಲ್ಲಿನ ಅವ್ಯವಹಾರಗಳ ಹಿನ್ನೆಲೆಯಲ್ಲಿ ತೀವ್ರ ಟೀಕೆಗೆ ಒಳಗಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ (NTA) ಸರ್ಕಾರ ಅಮೂಲಾಗ್ರ ಬದಲಾವಣೆ ತರುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಎನ್‌ಟಿಎ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಆಡಿಟ್ (Audit) ನಡೆಸುವುದು, ಮತ್ತು ಪ್ರೋಟೋಕಾಲ್ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಇತ್ಯಾದಿ ಕ್ರಮಗಳಿಗೆ ಆದೇಶಿಸಿದ್ದಾರೆ. ಪ್ರಲ್ಹಾದ್ ಜೋಶಿ ಅವರು ಇಂದು ಸೋಮವಾರ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ, ಎನ್‌ಟಿಎ ಮಹಾನಿರ್ದೇಶಕರು ಹಾಗು ಇತರ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ್ಧಾರೆ. ಈ ವೇಳೆ, ಎನ್‌ಟಿಎ ತಾನು ತೆಗೆದುಕೊಂಡ ಕೆಲ ಕ್ರಮಗಳ ಕುರಿತು ಶಿಕ್ಷಣ ಸಚಿವರಿಗೆ ಮಾಹಿತಿ ನೀಡಿದೆ:
- 50ಕ್ಕೂ ಹೆಚ್ಚು ಸಿಬ್ಬಂದಿ ವಜಾ: ಸುಧಾರಣಾ ಕ್ರಮಗಳ ಭಾಗವಾಗಿ ಎನ್‌ಟಿಎಯ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ.
- ಹೊಸ ನೇಮಕಾತಿಗಳು: ಸಂಸ್ಥೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಿಟಿಒ (CTO), ಸಿಎಫ್ಒ (CFO), ಮತ್ತು ಮಾಹಿತಿ ಭದ್ರತಾ ಅಧಿಕಾರಿ ಸೇರಿದಂತೆ 10 ಹೊಸ ಉನ್ನತ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಖಾಸಗಿ ವಲಯದ ತಜ್ಞರನ್ನು ಸೈಬರ್ ಭದ್ರತೆ ಮತ್ತು ಪರೀಕ್ಷಾ ಪ್ರಕ್ರಿಯೆಗಳಿಗಾಗಿ ನೇಮಿಸಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ಚಾಮರಾಜನಗರ ಶೂಟೌಟ್ ಪ್ರಕರಣ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಿಡಿ
ಶಿಕ್ಷಣ ಸಚಿವಾಲಯದ ಟ್ವೀಟ್
Education Minister Shri @JoshiPralhad held a meeting with the Secretary, Department of Higher Education, DG @NTA_Exams, and other senior officials.
The Minister was apprised on the steps taken by NTA in the wake of recent issues, particularly with reference to reforming the… pic.twitter.com/D5r5jSY0q0
— Ministry of Education (@EduMinOfIndia) August 17, 2026
ಪ್ರಲ್ಹಾದ್ ಜೋಶಿ ನಿರ್ದೇಶನಗಳು
ಪರೀಕ್ಷಾ ಪತ್ರಿಕೆಗಳ ಗೌಪ್ಯತೆಯನ್ನು ಕಾಪಾಡಲು ‘ಕಾನ್ಫಿಡೆನ್ಷಿಯಲ್ ಆಪರೇಷನ್ಸ್’ (CONOPS) ಅನ್ನು ಸಂಪೂರ್ಣವಾಗಿ ಬದಲಾಯಿಸಲಾಗಬೇಕು. ಏರ್-ಗ್ಯಾಪ್ಡ್ ಸಿಸ್ಟಮ್‌ಗಳನ್ನು ಅಳವಡಿಸುವುದು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ನಿಯಮಗಳನ್ನು ಪಾಲಿಸಲು ಅಧಿಕಾರಿಗಳಿಗೆ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ.
ಎನ್‌ಟಿಎ ನಡೆಸುವ ಎಲ್ಲಾ ಪರೀಕ್ಷಾ ಪ್ರಕ್ರಿಯೆಗಳ ಸಮಗ್ರ ಆಡಿಟ್ ನಡೆಸಲು ಮತ್ತು ಅದರಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಶಿಕ್ಷಣ ಸಚಿವರು ಈ ಸಂದರ್ಭದಲ್ಲಿ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ‘ಉಚಿತ ಎಲೆಕ್ಟ್ರಿಕ್ ಸ್ಟೌ’ ಸುಳ್ಳು ಸಂದೇಶ: ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ
ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವುದು ಮತ್ತು ಪರೀಕ್ಷೆಗಳನ್ನು ಸುರಕ್ಷಿತವಾಗಿ ಹಾಗೂ ಸಮರ್ಥವಾಗಿ ನಡೆಸುವುದು ಈ ಸುಧಾರಣೆಗಳ ಮುಖ್ಯ ಉದ್ದೇಶವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ