ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿಯಿಂದ ಪರೀಕ್ಷಾ ಸಂಸ್ಥೆಗೆ ಶಸ್ತ್ರಚಿಕಿತ್ಸೆ; ಪರೀಕ್ಷಾ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಆದೇಶ – Kannada News | Education Minister Pralhad Joshi orders for overhaul of examination system, cracks down on NTA

ನವದೆಹಲಿ, ಆಗಸ್ಟ್ 17: ಯುಜಿಸಿ ನೆಟ್ (UGC NET) ಪರೀಕ್ಷೆಯಲ್ಲಿನ ಅವ್ಯವಹಾರಗಳ ಹಿನ್ನೆಲೆಯಲ್ಲಿ ತೀವ್ರ ಟೀಕೆಗೆ ಒಳಗಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ (NTA) ಸರ್ಕಾರ ಅಮೂಲಾಗ್ರ ಬದಲಾವಣೆ ತರುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಎನ್​ಟಿಎ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಆಡಿಟ್ (Audit) ನಡೆಸುವುದು, ಮತ್ತು ಪ್ರೋಟೋಕಾಲ್​ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಇತ್ಯಾದಿ ಕ್ರಮಗಳಿಗೆ ಆದೇಶಿಸಿದ್ದಾರೆ. ಪ್ರಲ್ಹಾದ್ ಜೋಶಿ ಅವರು ಇಂದು ಸೋಮವಾರ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ, ಎನ್​ಟಿಎ ಮಹಾನಿರ್ದೇಶಕರು ಹಾಗು ಇತರ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ್ಧಾರೆ. ಈ ವೇಳೆ, ಎನ್​ಟಿಎ ತಾನು ತೆಗೆದುಕೊಂಡ ಕೆಲ ಕ್ರಮಗಳ ಕುರಿತು ಶಿಕ್ಷಣ ಸಚಿವರಿಗೆ ಮಾಹಿತಿ ನೀಡಿದೆ:

  • 50ಕ್ಕೂ ಹೆಚ್ಚು ಸಿಬ್ಬಂದಿ ವಜಾ: ಸುಧಾರಣಾ ಕ್ರಮಗಳ ಭಾಗವಾಗಿ ಎನ್‌ಟಿಎಯ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ.
  • ಹೊಸ ನೇಮಕಾತಿಗಳು: ಸಂಸ್ಥೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಿಟಿಒ (CTO), ಸಿಎಫ್ಒ (CFO), ಮತ್ತು ಮಾಹಿತಿ ಭದ್ರತಾ ಅಧಿಕಾರಿ ಸೇರಿದಂತೆ 10 ಹೊಸ ಉನ್ನತ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಖಾಸಗಿ ವಲಯದ ತಜ್ಞರನ್ನು ಸೈಬರ್ ಭದ್ರತೆ ಮತ್ತು ಪರೀಕ್ಷಾ ಪ್ರಕ್ರಿಯೆಗಳಿಗಾಗಿ ನೇಮಿಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಚಾಮರಾಜನಗರ ಶೂಟೌಟ್ ಪ್ರಕರಣ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಿಡಿ

ಶಿಕ್ಷಣ ಸಚಿವಾಲಯದ ಟ್ವೀಟ್

ಪ್ರಲ್ಹಾದ್ ಜೋಶಿ ನಿರ್ದೇಶನಗಳು

ಪರೀಕ್ಷಾ ಪತ್ರಿಕೆಗಳ ಗೌಪ್ಯತೆಯನ್ನು ಕಾಪಾಡಲು ‘ಕಾನ್ಫಿಡೆನ್ಷಿಯಲ್ ಆಪರೇಷನ್ಸ್’ (CONOPS) ಅನ್ನು ಸಂಪೂರ್ಣವಾಗಿ ಬದಲಾಯಿಸಲಾಗಬೇಕು. ಏರ್-ಗ್ಯಾಪ್ಡ್ ಸಿಸ್ಟಮ್‌ಗಳನ್ನು ಅಳವಡಿಸುವುದು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ನಿಯಮಗಳನ್ನು ಪಾಲಿಸಲು ಅಧಿಕಾರಿಗಳಿಗೆ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ.

ಎನ್‌ಟಿಎ ನಡೆಸುವ ಎಲ್ಲಾ ಪರೀಕ್ಷಾ ಪ್ರಕ್ರಿಯೆಗಳ ಸಮಗ್ರ ಆಡಿಟ್ ನಡೆಸಲು ಮತ್ತು ಅದರಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಶಿಕ್ಷಣ ಸಚಿವರು ಈ ಸಂದರ್ಭದಲ್ಲಿ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ‘ಉಚಿತ ಎಲೆಕ್ಟ್ರಿಕ್ ಸ್ಟೌ’ ಸುಳ್ಳು ಸಂದೇಶ: ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ

ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವುದು ಮತ್ತು ಪರೀಕ್ಷೆಗಳನ್ನು ಸುರಕ್ಷಿತವಾಗಿ ಹಾಗೂ ಸಮರ್ಥವಾಗಿ ನಡೆಸುವುದು ಈ ಸುಧಾರಣೆಗಳ ಮುಖ್ಯ ಉದ್ದೇಶವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *