ಶಿಮ್ಲಾ, ಏಪ್ರಿಲ್ 27: ಹಿಮಾಚಲ ಪ್ರದೇಶದ ಶಿಮ್ಲಾ (Shimla) ಜಿಲ್ಲೆಯ ಹಳ್ಳಿಯೊಂದರಲ್ಲಿ ಧಾರ್ಮಿಕ ಸಮಾರಂಭದಲ್ಲಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಶಿಮ್ಲಾದ ರೋಹ್ರುವಿನ ಆಂಧ್ರ ಗ್ರಾಮದ ನಿವಾಸಿ 26 ವರ್ಷ ರಿತಿಕಾ ಎಂದು ಗುರುತಿಸಲಾಗಿದೆ. ಕುಲ್ಗಾಂವ್ ಗ್ರಾಮದಲ್ಲಿ ಸ್ಥಳೀಯ ದೇವತೆಯ ಹೊಸದಾಗಿ ನಿರ್ಮಿಸಲಾದ ದೇವಾಲಯದ ಪ್ರತಿಷ್ಠಾಪನಾ ಸಮಾರಂಭದ ಸಂದರ್ಭದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ.
ದೇವಸ್ಥಾನದಲ್ಲಿ ಎಲ್ಲರೂ ನೃತ್ಯ ಮಾಡುತ್ತಿದ್ದಾಗ, ಆರೋಪಿ ಗುಂಡು ಹಾರಿಸಿದ್ದಾನೆ. ಆ ಗುಂಡು ರಿತಿಕಾಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ಆ ಸ್ಥಳಕ್ಕೆ ತೆರಳಿ ಮೃತದೇಹವನ್ನು ವಶಪಡಿಸಿಕೊಂಡರು.
ಇದನ್ನೂ ಓದಿ: ಸೆಖೆ ತಡೆಯಲಾಗದೆ ಎಸಿ ಕೊಡಿಸಿ ಎಂದ ಪತ್ನಿಗೆ ನೋ ಎಂದ ಗಂಡ; ಆಮೇಲಾಗಿದ್ದು ದುರಂತ!
ಆ ಸ್ಥಳದಿಂದ ಸಾಕ್ಷಿಗಳನ್ನು ಸಂಗ್ರಹಿಸಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ತೀವ್ರ ಹುಡುಕಾಟದ ನಂತರ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಜತ್ ಸೋಹ್ತಾ (28) ಮತ್ತು ಅಮಿತ್ ಅಲಿಯಾಸ್ ರೋಹಿತ್ ಭಾಪ್ತಾ (32) ಎಂಬ ಇಬ್ಬರು ವ್ಯಕ್ತಿಗಳನ್ನು ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 103 (1) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ