ಶಿವಮೊಗ್ಗ: ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು – Kannada News | Shivamogga Bhadra Canal Tragedy: 4 Family Members Drown

ಶಿವಮೊಗ್ಗ, ಜನವರಿ 18: ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಡೆದದ್ದೇನು?

ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​​ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾರೆ. ಒಬ್ಬರು ಕಾಲು ಜಾರಿ ಭದ್ರಾ ನಾಲೆಗೆ ಬಿದ್ದಿದ್ದು, ಅವರನ್ನ ರಕ್ಷಿಸಲು ಹೋಗಿ ನಾಲ್ವರೂ ನೀರುಪಾಲಾಗಿದ್ದಾರೆ. ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು. ಸದ್ಯ ಶವಗಳಿಗಾಗಿ ಹೊಳೆಹೊನ್ನೂರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ನಡೆದಿದೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Published On – 6:37 pm, Sun, 18 January 26

Source link

Leave a Reply

Your email address will not be published. Required fields are marked *