ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ – Kannada News | SSLC Student Killed in Shivamogga’s Sulekebailu Layout; Two Students Detained After School Clash

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಮಾಹಿತಿ ನೀಡಿದ್ದಾರೆ. ಮೃತ ಸಂಕೇತ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಕೇತ್ ಓದಿನಲ್ಲಿ ಚುರುಕಾಗಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *