Headlines

ಶುಲ್ಕ ಬಾಕಿ ಆರೋಪ: ವಿದ್ಯಾರ್ಥಿನಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಲ್ ಟಿಕೆಟ್ ನಿರಾಕರಿಸಿದ ಕಾಲೇಜು – Kannada News | BAGSS College Denies 2nd PUC Exam Hall Ticket Over Unpaid Fees in Ranebennur

ಹಾವೇರಿ, ಫೆಬ್ರವರಿ 28: ಶುಲ್ಕ ಬಾಕಿ ಇರುವ ಕಾರಣ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಬಿಎಜಿಎಸ್ಎಸ್ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿರುವ ಆರೋಪ ಕೇಳಿಬಂದಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಸಾರಾ, 30 ಸಾವಿರ ರೂಪಾಯಿ ಶುಲ್ಕ ಬಾಕಿ ಉಳಿಸಿಕೊಂಡಿದ್ದಾರೆ. ಶುಲ್ಕ ಪಾವತಿಸಿದರೆ ಮಾತ್ರ ಹಾಲ್ ಟಿಕೆಟ್ ನೀಡುವುದಾಗಿ ಕಾಲೇಜು ಆಡಳಿತ ಮಂಡಳಿ ಹೇಳಿದೆ. ಈ ನಿರ್ಧಾರದಿಂದ ವಿದ್ಯಾರ್ಥಿನಿಯ ಭವಿಷ್ಯ ಅತಂತ್ರಗೊಂಡಿದ್ದು, ಒಂದು ವರ್ಷ ನಷ್ಟವಾಗುವ ಭೀತಿ ಎದುರಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *