ಬೆಂಗಳೂರು, ಮೇ 12: ಶೃಂಗೇರಿ ಎಂಎಲ್ಎ ಸ್ಥಾನದ ಗೊಂದಲದ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ವೋಟ್ ಟ್ಯಾಂಪರಿಂಗ್ ಆರೋಪ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ನಂತರ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಟ್ಯಾಂಪರಿಂಗ್ ಆರೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ದೂರು ದಾಖಲಿಸಿಕೊಂಡು ಎಫ್ಐಆರ್ ನೊಂದಾಯಿಸಲಾಗಿದೆ. ರಾಜ್ಯ ಪೊಲೀಸರು ಈ ಟ್ಯಾಂಪರಿಂಗ್ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎಫ್ಎಸ್ಎಲ್ (Forensic Science Laboratory) ಸಹಾಯ ಪಡೆಯಲಾಗುತ್ತಿದ್ದು, ಇದು ಕೌಂಟಿಂಗ್ ಪ್ರಕ್ರಿಯೆಯ ಒಂದು ಭಾಗವಾಗಿಯೂ ಪರಿಶೀಲನೆಗೆ ಒಳಪಡಲಿದೆ. ಕಾನೂನು ಪ್ರಕಾರ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
