ನಟ ದರ್ಶನ್ (Darshan) ಅವರು ಪರಪ್ಪನ ಅಗ್ರಹಾರ ಜೈಲು ಸೇರಿ ಹಲವು ದಿನಗಳು ಕಳೆದಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಕೋಡಿಮಠದ ಶ್ರೀಗಳು (Kodi Mutt Swamiji) ಪ್ರತಿಕ್ರಿಯೆ ನೀಡಿದ್ದಾರೆ. ‘ಸಿಂಹಪುರಿಯ ಸಿಂಹ’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ದರ್ಶನ್ ಬಗ್ಗೆ ಸ್ವಾಮೀಜಿ ಮಾತನಾಡಿದರು. ‘ಈ ವಿಷಯ ಕೋರ್ಟ್ನಲ್ಲಿ ಇದೆ. ಆ ಬಗ್ಗೆ ನಾವು ಮಾತನಾಡಬಾರದು. ಮಾತಾಡಿದರೆ ನಾವು ನ್ಯಾಯಾಲಯಕ್ಕೆ ವಿರುದ್ಧ ಹೋದಂತೆ ಆಗುತ್ತದೆ. ನ್ಯಾಯಾಲಯದಲ್ಲಿ ಆಗುವ ತೀರ್ಮಾನವನ್ನು ನಾವು ಒಪ್ಪಿಕೊಳ್ಳಲೇಬೇಕು. ಅವರಿಗೆ ದೇವರು ಒಳ್ಳೆಯದು ಮಾಡಲಿ. ನ್ಯಾಯಾಲಯದಲ್ಲಿ ಇರುವ ವಿಷಯಕ್ಕೆ ನಾವು ಬಾಯಿ ಹಾಕುವುದು ಅಷ್ಟು ಒಳ್ಳೆಯದಲ್ಲ’ ಎಂದು ಕೋಡಿಶ್ರೀ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.