
ಕುಂಕುಮವನ್ನು ನೀರಿಗೆ ಹಾಕಿ, ಅದನ್ನು ಒಂದು ತಟ್ಟೆಯಲ್ಲಿ ಹಾಕಿ, ಅದರಲ್ಲಿ ಒಂದು ನಾಣ್ಯವನ್ನು ಇಟ್ಟುಕೊಂಡು ನೀವು ವಾಸಿಸುವಂಥ ಮನೆಗೆ ಸಂಜೆಯ ಹೊತ್ತಿಗೆ ನಿವಾಳಿಸಿ, ಮನೆಯಿಂದ ಹೊರಗೆ ಹಾಕಿ. ಇದರಿಂದ ಸಾಮರಸ್ಯ ಮೂಡುತ್ತದೆ ಹಾಗೂ ದೃಷ್ಟಿ ದೋಷದ ನಿವಾರಣೆ ಆಗುತ್ತದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ಸಮಾಜದಲ್ಲಿ ನಿಮ್ಮ ವ್ಯಕ್ತಿತ್ವಕ್ಕೆ ಮನ್ನಣೆ ಸಿಗಲಿದೆ. ನಿಮ್ಮಲ್ಲಿ ಕೆಲವರಿಗೆ ಗೌರವ- ಸನ್ಮಾನಗಳು ಆಗಬಹುದು. ಸಂಬಂಧಿಕರು ನಿಮ್ಮನ್ನು ಭೇಟಿ ಆಗುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರುತ್ತದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ಮಹತ್ವದ ಯೋಜನೆ ರೂಪಿಸುವಿರಿ. ನಿಮ್ಮ ನೇರ ನಡೆ- ನುಡಿ ಎಲ್ಲರಿಗೂ ಇಷ್ಟವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ, ದೈಹಿಕ ವ್ಯಾಯಾಮ ಮರೆಯಬೇಡಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ಜ್ಞಾನ ವೃದ್ಧಿಯಾಗುವ ದಿನ. ಅಂದರೆ ಈ ದಿನ ಸಮಯವನ್ನು ಸ್ವಲ್ಪವೂ ವ್ಯರ್ಥ ಮಾಡದೆ ಏನಾದರೂ ಹೊಸ ವಿಷಯ ಕಲಿಯಲು ಪ್ರಯತ್ನಿಸುವಿರಿ. ಮನೆಯಲ್ಲಿ ಧಾರ್ಮಿಕ ಅಥವಾ ಆಧ್ಯಾತ್ಮಿಕ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಆಗಬಹುದು. ಹಿರಿಯರ ಮಾರ್ಗದರ್ಶನದಿಂದ ನಿಮ್ಮ ಜೀವನದ ಗೊಂದಲಗಳು ದೂರವಾಗಲಿವೆ. ಆರ್ಥಿಕವಾಗಿ ಸ್ಥಿತಿ ಸುಧಾರಿಸಲಿದ್ದು, ಸ್ಥಗಿತ ಆಗಿದ್ದ ಹಣಕಾಸಿನ ವ್ಯವಹಾರಗಳು ಚೇತರಿಕೆ ಕಾಣಲಿವೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ಪ್ರವಾಸದ ಯೋಜನೆಗಳಿದ್ದರೆ ಅವು ಕಾರ್ಯಗತವಾಗಲಿವೆ. ಹಣಕಾಸಿನ ವಿಚಾರದಲ್ಲಿ ತೃಪ್ತಿದಾಯಕ ವಾತಾವರಣವಿರುತ್ತದೆ. ಕಲೆ ಅಥವಾ ಸಾಹಿತ್ಯದ ಮೇಲೆ ಒಲವು ಹೆಚ್ಚಾಗಲಿದೆ. ಆರೋಗ್ಯದ ದೃಷ್ಟಿಯಿಂದ ಲಘು ಆಹಾರ ಸೇವನೆ ಮಾಡುವುದು ಉತ್ತಮ. ನಿಮ್ಮ ಆಪ್ತ ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಹೊಸ ಚೈತನ್ಯ ಸಿಗಲಿದೆ. ಸಣ್ಣಪುಟ್ಟ ಏರುಪೇರಾದಂಥ ವಿಷಯಗಳಿಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ದಿನವನ್ನು ಆನಂದಿಸಿ.
ಲೇಖನ- ಸ್ವಾತಿ ಎನ್.ಕೆ.