Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 28ರ ದಿನಭವಿಷ್ಯ – Kannada News | February 28 Satursday Horoscope: Birth Numbers 4,5,6 Daily Forecast and Life Advice

ಉಪ್ಪು- ಮೆಣಸು ಈ ಎರಡರಿಂದ ದೃಷ್ಟಿ ದೋಷ ನಿವಾರಣೆಗಾಗಿ ನಿವಾಳಿಸಿಕೊಳ್ಳಿ. ಮುಖ್ಯವಾಗಿ ಪದೇಪದೇ ಅಪಘಾತ, ಗಾಯಗಳು ಆಗುತ್ತಿದ್ದಲ್ಲಿ ಸಂಜೆ ವೇಳೆಗೆ ಇದನ್ನು ಮಾಡಿಕೊಳ್ಳುವುದರಿಂದ ದೃಷ್ಟಿದೋಷದ ನಿವಾರಣೆ ಆಗಿ, ಸಮಸ್ಯೆಯಿಂದ ಹೊರಗೆ ಬರುತ್ತೀರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ ಸೂಚನೆ ದೊರೆಯಲಿದ್ದು, ಆ ಕಡೆಗೆ ಪೂರ್ಣ ಪ್ರಮಾಣದಲ್ಲಿ ಗಮನ ನೀಡುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ಈಗಾಗಲೇ ನೀವು ಕೆಲಸ ಮಾಡಿದ್ದೀರಿ, ಅದಕ್ಕಾಗಿ ನಿಮಗೆ ಕೊಡಬೇಕಾದ ಹಣವನ್ನು ಇವತ್ತು- ನಾಳೆ ಎನ್ನುತ್ತಾ ಮುಂದಕ್ಕೆ ಹಾಕುತ್ತಾ ಬರುತ್ತಿರುವವರಿಗೆ ಗಟ್ಟಿಯಾದ ಧ್ವನಿಯಲ್ಲಿ ಕೇಳಲಿದ್ದೀರಿ, ಆ ಹಣ ವಸೂಲಿಯೇ ಆಗಿಬಿಡಲಿದೆ ಅಥವಾ ಇಂಥ ದಿನ ಖಚಿತವಾಗಿ ಹಣ ದೊರೆಯುವ ಭರವಸೆ ಸಿಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸಂತೆ ಹೊತ್ತಿಗೆ ಮೂರು ಮೊಳ ಎಂಬ ರೀತಿಯಲ್ಲಿ ಯಾವ ಕೆಲಸವನ್ನು ಸಹ ಮಾಡುವುದಕ್ಕೆ ಹೋಗಬೇಡಿ. ತುರ್ತಾಗಿ ಕೆಲಸ ಮುಗಿಸುವ ಭರದಲ್ಲಿ ಗುಣಮಟ್ಟದ ಜೊತೆ ರಾಜೀ ಮಾಡಿಕೊಂಡು, ದೀರ್ಘಾವಧಿಯಲ್ಲಿ ಅದಕ್ಕಾಗಿ ಪಶ್ಚಾತಾಪ ಪಡುವಂತೆ ಆಗುತ್ತದೆ. ಸೋದರ- ಸೋದರಿಯರ ಜತೆಗಿನ ಭಿನ್ನಾಭಿಪ್ರಾಯ ಈಗಾಗಲೇ ಇದ್ದಲ್ಲಿ ಅದು ವಿಪರೀತಕ್ಕೆ ಹೋಗುವ ಸಾಧ್ಯತೆ ಇರುತ್ತದೆ.

ಲೇಖನ- ಸ್ವಾತಿ ಎನ್.ಕೆ.

Published On – 12:20 am, Sat, 28 February 26

Source link

Leave a Reply

Your email address will not be published. Required fields are marked *