ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ – Kannada News | March 01 Sunday Horoscope: Birth Numbers 4,5,6 Daily Forecast and Life Advice

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಅದರಲ್ಲೂ ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವಂಥ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗಲಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳಿಂದ ನೀವು ಆತ್ಮವಿಶ್ವಾಸ ಕಳೆದುಕೊಳ್ಳದಿರುವುದು ಮುಖ್ಯ ಆಗುತ್ತದೆ. ಕ್ರೆಡಿಟ್ ಕಾರ್ಡ್ ಗಾಗಿ ಅಪ್ಲೈ ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನೀವು ನಿರೀಕ್ಷೆ ಕೂಡ ಮಾಡಿರದಂಥ ಹಣ ಕೈ ಸೇರಲಿದೆ. ಪ್ರತಿ ತಿಂಗಳು ಇಂತಿಷ್ಟು ಆದಾಯ ಬರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆಲೋಚಿಸುತ್ತಾ ಇರುವವರು ಅದಕ್ಕೆ ಬೇಕಾದ ಪ್ರಯತ್ನ ಆರಂಭ ಮಾಡುತ್ತೀರಿ. ಸಂಗಾತಿ ಜೊತೆಗೆ ಸಂಬಂಧಿಕರ ಕಾರಣದಿಂದ ಸಣ್ಣ ಪುಟ್ಟ ಮನಸ್ತಾಪ ಆಗಬಹುದು. ಆದರೆ ಇದನ್ನು ಕೂತು ಮಾತನಾಡುವ ಮೂಲಕ ಬಗೆಹರಿಸಿಕೊಳ್ಳುತ್ತೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿಮ್ಮಷ್ಟಕ್ಕೆ ನೀವು ಅಂತ ಇದ್ದರೂ ಕೆಲವು ವಾದ- ವಿವಾದಗಳಿಗೆ ಕೆಲವರು ಎಳೆಯುತ್ತಾರೆ. ದೊಡ್ಡ ಗುಂಪಿನಲ್ಲಿ ಜನರು ಇರುವ ಕಡೆಗೆ ನೀವು ಹೋಗದಿರುವುದು ಉತ್ತಮ. ಇದನ್ನು ಮೀರಿಯೂ ಅಂಥ ಸ್ಥಳದಲ್ಲಿ ನೀವು ಇದ್ದೀರಿ ಅಂತಾದಲ್ಲಿ ಮೌನವಾಗಿ ಇರುವುದು ಕ್ಷೇಮ. ಸಹನೆ ಇಟ್ಟುಕೊಂಡು ಬಹಳ ಸಮಯದಿಂದ ಕಾಯುತ್ತಾ ಬಂದಿದ್ದಕ್ಕೂ ಸಾರ್ಥಕ ಎಂಬಂತೆ ಕೆಲವು ಕಾರ್ಯಗಳು ನಿಮ್ಮಂತೆಯೇ- ನಿಮಗೆ ಬೇಕಾದಂತೆಯೇ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Published On – 12:20 am, Sun, 1 March 26

Source link

Leave a Reply

Your email address will not be published. Required fields are marked *