ಈ ದಿನ ಹಣೆಯ ಮಧ್ಯಭಾಗದಲ್ಲಿ (ಆಜ್ಞಾ ಚಕ್ರ) ಕುಂಕುಮ, ಶ್ರೀಗಂಧ ಅಥವಾ ವಿಭೂತಿಯನ್ನು ಇಟ್ಟುಕೊಳ್ಳಿ. ಇದು ನಿಮ್ಮ ಏಕಾಗ್ರತೆಯನ್ನು ಹೆಚ್ಚಿಸುತ್ತದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):
ಮೀನುಗಾರಿಕೆ- ಮೀನು ಸಾಕಣೆ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ದ್ವಿಚಕ್ರ ವಾಹನ ಖರೀದಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೀರಿ. ನೀವೇನಾದರೂ ವ್ಯಾಪಾರ- ವ್ಯವಹಾರ ಮಾಡುವಂಥವರಾದರೆ ಅದಕ್ಕೆ ಅಗತ್ಯ ಇರುವಂಥ ಟ್ರಕ್, ಲಾರಿ, ಲಗೇಜ್ ಆಟೋ ಇಂಥವುಗಳನ್ನು ಖರೀದಿಸುವ ಸಾಧ್ಯತೆ ಇದೆ. ಚರ್ಮ- ಕೂದಲಿನ ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯ ನೀಡಬೇಕು.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):
ತಲೆಹೊಟ್ಟಿನ ಸಮಸ್ಯೆ ಈಗಾಗಲೇ ಇದ್ದಲ್ಲಿ ಅದು ಉಲ್ಬಣ ಆಗಬಹುದು. ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳುವುದಕ್ಕೆ ಪ್ರಾಮುಖ್ಯ ನೀಡಿ. ಪಿತ್ರಾರ್ಜಿತ ಆಸ್ತಿ ಹಂಚಿಕೆ ಬಗ್ಗೆ ಈ ಹಿಂದೆ ಯಾವಾಗಲೋ ನಿಮಗೆ ಇಂಥದ್ದನ್ನು ನೀಡುತ್ತೇನೆ ಎಂದು ಹೇಳಿದ್ದಿದ್ದು, ಈಗ ತೀರ್ಮಾನ ಬದಲಾವಣೆ ಮಾಡಿಕೊಂಡಿರುವುದಾಗಿ ಹೇಳಲಿದ್ದಾರೆ. ಅಡ್ವರ್ಟೈಸ್ ಮೆಂಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಒತ್ತಡ ಇರಲಿದೆ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):
ಕುಟುಂಬಕ್ಕೆ ಅಗತ್ಯ ಇರುವ ವಸ್ತುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಸಮಯವನ್ನು ಇಡಲಿದ್ದೀರಿ. ನಿಮ್ಮಲ್ಲಿ ಕೆಲವರು ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳಲಿದ್ದು, ಹೋಟೆಲ್ ಬುಕ್ಕಿಂಗ್, ಕಾರು ಬುಕ್ಕಿಂಗ್ ಇಂಥವು ಮಾಡಿಕೊಳ್ಳುವುದಕ್ಕೆ ಸ್ನೇಹಿತರ ಸಹಾಯವನ್ನು ಕೇಳಲಿದ್ದೀರಿ. ಆದಾಯ ತೆರಿಗೆಗೆ ಸಂಬಂಧಿಸಿದ ವಿಷಯದ ಬಗ್ಗೆ ಚರ್ಚೆ ಮಾಡುವುದಕ್ಕೆ ಆ ಕ್ಷೇತ್ರದಲ್ಲಿ ಪರಿಣತ ಆದಂಥ ವ್ಯಕ್ತಿಗಳ ಜತೆಗೆ ಮಾತುಕತೆ ನಡೆಸಲಿದ್ದೀರಿ.
ಲೇಖನ- ಸ್ವಾತಿ ಎನ್.ಕೆ.
