ಮನೆಯನ್ನು ಒರೆಸುವ ನೀರಿಗೆ ಸ್ವಲ್ಪ ಕಲ್ಲು ಉಪ್ಪನ್ನು ಸೇರಿಸಿ. ಇದು ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು (Negative Energy) ದೂರ ಮಾಡುತ್ತದೆ. ವಿನಾಕಾರಣ ಜಗಳ- ಕಲಹ ಆಗುತ್ತಿದ್ದಲ್ಲಿ ಆ ಸಮಸ್ಯೆ ನಿವಾರಣೆ ಆಗುತ್ತದೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):
ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):
ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ ಎಂದಾದಲ್ಲಿ ಆ ಬಗ್ಗೆ ಮಾಹಿತಿ ದೊರೆಯಲಿದೆ. ನೀರು ಮಾರಾಟದ ಮೂಲಕ ಆದಾಯವನ್ನು ಪಡೆಯುತ್ತಾ ಇರುವವರಿಗೆ ದೀರ್ಘಾವಧಿಗೆ- ದೊಡ್ಡ ಪ್ರಮಾಣದ ಆರ್ಡರ್ ದೊರೆಯುವಂಥ ಸಾಧ್ಯತೆ ಇದೆ. ಕನಿಷ್ಠ ಪ್ರಮಾಣದ ಹೂಡಿಕೆ ಜತೆಗೆ ಆರಂಭಿಸಿದ ವ್ಯವಹಾರವೊಂದು ಹೆಚ್ಚಿನ ಪ್ರಮಾಣದ ಲಾಭ ತಂದುಕೊಡಲಿದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):
ನಿಂತ ನಿಲವಿನಲ್ಲೇ ನಿಮ್ಮ ಅಭಿಪ್ರಾಯ ತಿಳಿಸಿಬಿಡಬೇಕು ಎಂದು ಪಟ್ಟು ಹಿಡಿಯುವಂಥವರ ಜತೆಗಿನ ವ್ಯವಹಾರ ಮುಂದುವರಿಸಲಿಕ್ಕೆ ಹೋಗಬೇಡಿ. ಬ್ಯಾಂಕ್ ಗೆ ಕಟ್ಟಲೇಬೇಕಾದ ಹಣವನ್ನು ಹೊಂದಿಸಲು ಹೆಚ್ಚು ಶ್ರಮ ಹಾಕಲಿದ್ದೀರಿ. ಇನ್ನು ನಿಮ್ಮಲ್ಲಿ ಕೆಲವರು ಉಳಿತಾಯ ಅಥವಾ ಹೂಡಿಕೆ ಹಣವನ್ನು ಹಿಂತೆಗೆದುಕೊಂಡು, ಸಾಲವನ್ನು ಚುಕ್ತಾ ಮಾಡುವುದಕ್ಕೆ ತೀರ್ಮಾನ ಮಾಡುತ್ತೀರಿ.
ಲೇಖನ- ಸ್ವಾತಿ ಎನ್.ಕೆ.
