
ಸಾಯಿಬಾಬಾ ಅಥವಾ ರಾಘವೇಂದ್ರ ಸ್ವಾಮಿಗಳ ದರ್ಶನ ಮಾಡುವುದು ಮತ್ತು ಮನೆಯಲ್ಲಿನ ಹಿರಿಯರ ಕಾಲಿಗೆ ನಮಸ್ಕರಿಸಿ ದಿನದ ಕೆಲಸ ಆರಂಭಿಸುವುದು ಸಕಲ ಕಾರ್ಯಸಿದ್ಧಿಗೆ ಕಾರಣವಾಗುತ್ತದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):
ಮನೆಗೆ ಎಲೆಕ್ಟ್ರಿಕ್ ಅಥವಾ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವಂಥ ಯೋಗ ಇದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇರುವಂಥವರು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವಂಥವರು, ಕಂಪನಿಗಳ ಸಿಇಒ, ಸಿಒಒ ಇಂಥ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುವಂಥವರಿಗೆ ಬಹಳ ಒಳ್ಳೆ ದಿನ ಇದು. ನಿಮ್ಮಲ್ಲಿ ಯಾರಾದರೂ ಸ್ಟಾರ್ಟ್ ಅಪ್ ಶುರು ಮಾಡುವುದಕ್ಕಾಗಿ ಸಿದ್ಧತೆ ನಡೆಸುತ್ತಿದ್ದೀರಿ ಅಂತಾದಲ್ಲಿ ಅದಕ್ಕೆ ಬೇಕಾದ ಹಣಕಾಸಿನ ಅನುಕೂಲಗಳು ಒದಗಿ ಬರಲಿವೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):
ಕಾನೂನಿಗೆ ಸಂಬಂಧಪಟ್ಟ ವಿಚಾರಗಳಲ್ಲಿ ಸಣ್ಣ- ಪುಟ್ಟ ಅಡೆತಡೆಗಳು ಕಾಡುತ್ತಿದ್ದಲ್ಲಿ ಅವುಗಳನ್ನು ನಿವಾರಿಸಿಕೊಂಡು, ಮುಂದಕ್ಕೆ ಸಾಗಲಿದ್ದೀರಿ. ಸ್ವಂತ ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಅವುಗಳ ವಿಸ್ತರಣೆಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ಇನ್ನು ಸರಿಯಾದ ಸಂಪನ್ಮೂಲ ವ್ಯಕ್ತಿಗಳು, ಕೆಲಸಗಾರರನ್ನು ಹುಡುಕಾಡುತ್ತಿದ್ದೀರಿ ಅಂತಾದಲ್ಲಿ ಅಂಥವರು ಸಹ ದೊರೆಯಲಿದ್ದಾರೆ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):
ಸುಮ್ಮನೆ ಇದ್ದಿದ್ದರೆ ಆಗುತ್ತಿತ್ತು ಎಂದೆನಿಸುವಂಥ ಹಲವು ಘಟನೆಗಳು ಈ ದಿನ ನಡೆಯಲಿವೆ. ಅಂತರಂಗದ ವಿಚಾರವನ್ನು ಯಾರ ಬಳಿಯಾದರೂ ಹೇಳಿಕೊಂಡಿದ್ದಲ್ಲಿ ಅವರು ಅದನ್ನು ಹಲವರ ಬಳಿಗೆ ಹೇಳಿಕೊಂಡು ಬಂದು, ನಿಮಗೆ ಮುಜುಗರದ ಸನ್ನಿವೇಶವನ್ನು ತಂದೊಡ್ಡಲಿದ್ದಾರೆ. ಸಂಗಾತಿಯು ನಿಮ್ಮ ಧೋರಣೆ ಬಗ್ಗೆ ಬೇಸರ ವ್ಯಕ್ತಪಡಿಸಬಹುದು. ನೀವು ಬಳಸುವ ಭಾಷೆ, ಅದನ್ನು ಆಡಿದ ರೀತಿ ಹಾಗೂ ಇತರ ವಿಚಾರಗಳನ್ನು ಮುಂದು ಮಾಡಿಕೊಂಡು, ಹೀಯಾಳಿಸಬಹುದು.
ಲೇಖನ- ಸ್ವಾತಿ ಎನ್.ಕೆ.